ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆ :
ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯನ್ನು ಸೆಪ್ಟೆಂಬರ್ 17 2023 ರಂದು ಜಾರಿಗೆ ತರಲಾಗಿದ್ದು ಈ ಯೋಜನೆ ಐದು ವರ್ಷಗಳವರೆಗೆ ಕಾರ್ಯನಿರ್ವಹಿಸುತ್ತದೆ. ವಿಶೇಷವಾಗಿ ದೇಶದ ಸಾಂಪ್ರದಾಯಿಕ ಕುಶಲ ಕರ್ಮಿಗಳು ಮತ್ತು ಕುಶಲಕರ್ಮಿಗಳಿಗಾಗಿ ಈ ಯೋಜನೆಯನ್ನು ಪ್ರಾರಂಭಿಸಲಾಗಿದೆ. ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯ ಅಡಿಯಲ್ಲಿ ಸರ್ಕಾರದಿಂದ ಆರ್ಥಿಕ ನೆರವನ್ನು ಪಡೆಯಬಹುದಾಗಿದೆ. ಈ ಯೋಜನೆಗಾಗಿ 13,000 ಕೋಟಿಗಳ ಬಜೆಟ್ ಅನ್ನು ಭಾರತ ಸರ್ಕಾರವು ನಿಗದಿಪಡಿಸಿದೆ. ದೇಶದ 30 ಲಕ್ಷಕ್ಕೂ ಹೆಚ್ಚು ಸಾಂಪ್ರದಾಯಿಕ ಕಲಾವಿದರು ಮತ್ತು ಕುಶಲಕರಣಿಗಳು ಈ ಯೋಜನೆಯ ಅಡಿಯಲ್ಲಿ ಪ್ರಯೋಜನ ಪಡೆಯಲಿದ್ದಾರೆ.
ಈ ಯೋಜನೆಯ ಬಡ್ಡಿದರ :
ವಿಶ್ವಕರ್ಮ ಯೋಜನೆಯ ಅಡಿಯಲ್ಲಿ ಪ್ರಧಾನ ಮಂತ್ರಿ ವಿಶ್ವಕರ್ಮ ಅವರಿಗೆ ಗುರುತಿನ ಚೀಟಿಯೊಂದಿಗೆ ಪ್ರಮಾಣ ಪತ್ರವನ್ನು ಸಹ ನೀಡಲಾಗುತ್ತದೆ ಅಲ್ಲದೆ ಒಂದು ಲಕ್ಷ ರೂಪಾಯಿಗಳ ವರೆಗೆ ಮೊದಲ ಕಂತಿನ ಹಣವನ್ನು 2 ಲಕ್ಷ ರೂಪಾಯಿಗಳ ವರೆಗೆ ಎರಡನೇ ಕಾಂತಿನಲ್ಲಿ ಸಾಲ ನೀಡಲಾಗುತ್ತದೆ ಒಟ್ಟಾರೆ ಮೂರು ಲಕ್ಷದವರೆಗೆ ಆರ್ಥಿಕ ನೆರವನ್ನು ಈ ಯೋಜನೆಯ ಅಡಿಯಲ್ಲಿ ನೀಡಲಾಗುತ್ತದೆ ಇದಕ್ಕೆ ಕೇವಲ ಶೇಕಡ ಐದರಷ್ಟು ಬಡ್ಡಿ ದರವನ್ನು ವಿಧಿಸಲಾಗುತ್ತದೆ.
ಈ ಯೋಜನೆಯ ಪ್ರಯೋಜನ ಪಡೆಯುವವರು :
ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಗೆ ಕಲ್ಲು ಹೊಡೆಯುವವರು ಬೀಗ ಹಾಕುವವರು ಮಾಲೆ ಕಟ್ಟುವವರು ಕ್ಷೌರಿಕರು ಅಥವಾ ಕಮ್ಮಾರರು ಅರ್ಜಿ ಸಲ್ಲಿಸಬಹುದಾಗಿದ್ದು ಅರ್ಜಿ ಸಲ್ಲಿಸಲು ಕನಿಷ್ಠ ವಯಸ್ಸು 18 ವರ್ಷಗಳು ಹಾಗೂ 18 ವರ್ಷಕ್ಕಿಂತ ನೀವೇನಾದರೂ ಅರ್ಜಿಯನ್ನು ಸಲ್ಲಿಸಿದರೆ ಈ ಯೋಜನೆಯ ಪ್ರಯೋಜನವನ್ನು ಪಡೆಯಲು ಸಾಧ್ಯವಾಗುವುದಿಲ್ಲ.
ಸರಿಯಾಗಿ ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯ ಅಡಿಯಲ್ಲಿ ಮೊದಲ 18 ಸಂಪ್ರದಾಯಿಕ ವೃತ್ತಿಗಳು ಈ ಯೋಜನೆಯ ಪ್ರಯೋಜನಗಳನ್ನು ಪಡೆಯಲು ಅರ್ಹರಾಗಿರುತ್ತವೆ. ಹಾಗಾಗಿ ನಿಮ್ಮ ಸ್ನೇಹಿತರು ಅಥವಾ ಬಂಧು ಮಿತ್ರರು ಯಾರಾದರೂ ಕುಶಲಕರ್ಮಿಗಳಾಗಿದ್ದರೆ ಅವರಿಗೆ ಕೇಂದ್ರ ಸರ್ಕಾರದಿಂದ ಸಹಾಯಧನ ಲಭ್ಯವಿದೆ ಎಂಬುದರ ಈ ಮಾಹಿತಿಯನ್ನು ಶೇರ್ ಮಾಡಿ ಧನ್ಯವಾದಗಳು.