ಯಾರ ತಟ್ಟೆಯಲ್ಲಿ ಏನು ಸತ್ತು ಬಿದ್ದಿದೆ..? ಕಪ್ಪುಚುಕ್ಕೆಯನ್ನು ವೈಟ್ನರ್ ನುಂಗಿತ್ತಾ..? ಸಿಎಂಗೆ HDK ಕೌಂಟರ್

WhatsApp
Telegram
Facebook
Twitter
LinkedIn

ಬೆಂಗಳೂರು : ಮುಡಾ ಪ್ರಕರಣದಲ್ಲಿ ದಿನಕ್ಕೊಂದು ಆರೋಪ ಪ್ರತ್ಯಾರೋಪಗಳ ಹೇಳಿಕೆ ಜಾಸ್ತಿಯಾಗಿದೆ…ಅದ್ರಲ್ಲೂ ಸಿಎಂ ಸಿದ್ದರಾಮಯ್ಯ ಮತ್ತು ಕುಮಾರಸ್ವಾಮಿ ಜಟಾಪಟಿ ತುಸು ಹೆಚ್ಚಾಗಿಯೇ ನಡೆಯುತ್ತಿದೆ. ಇಂದು ಮತ್ತೆ ಮುಡಾ ದಾಖಲೆಗಳನ್ನ ಹಾಕಿ ಸಿಎಂಗೆ ಸಾಮಾಜಿಕ ಜಾಲತಾಣದಲ್ಲಿ ಪ್ರಶ್ನೆ ಮಾಡಿರುವ ಕುಮಾರಸ್ವಾಮಿ ಈ ರೀತಿ ಪ್ರಶ್ನೆ ಕೇಳಿದ್ದಾರೆ. ಸನ್ಮಾನ್ಯ ಸಿಎಂ ಸಿದ್ದರಾಮಯ್ಯನವರೇ… ಮೂಡಾ ನಿವೇಶನ ಹಂಚಿಕೆಯಲ್ಲಿ ನನ್ನ ಹಾಗೂ ನನ್ನ ಕುಟುಂಬದ ಪಾತ್ರವೇ ಇಲ್ಲ ಎಂದು ಬೊಗಳೆ ಬಿಡುವ ನಿಮಗೆ ಕನ್ನಡ ಬರುತ್ತದೆ, ಭಾಷೆಯೂ ಗೊತ್ತಿದೆ ಎಂದು ನಾನಾದರೂ ಪರಿಭಾವಿಸುತ್ತೇನೆ.

ನೀವು ಸ್ವಯಂಘೋಷಿತ ವಕೀಲರಲ್ಲವೇ? ಇಲ್ಲಿರುವ ದಾಖಲೆಯನ್ನೊಮ್ಮೆ ಕಣ್ಣಲ್ಲಿ ಕಣ್ಣಿಟ್ಟು ಓದಿ ವ್ಯಂಗ್ಯವಾಡಿದ್ದಾರೆ. “50:50ರ ಅನುಪಾತದಲ್ಲಿಯೇ ಮೂಡಾ ಬದಲಿ ನಿವೇಶನ ನೀಡಲೇಬೇಕು ಎಂದು ಸಿಎಂ ಸಾಹೇಬರ ಧರ್ಮಪತ್ನಿ ‘ಒತ್ತಾಯ’ ಮಾಡಿದ್ದಾರೆ!!” “ಅರ್ಜಿದಾರರಾದ ಶ್ರೀಮತಿ ಪಾರ್ವತಮ್ಮ ಇವರಿಗೆ ಮಾರುಕಟ್ಟೆ ದರದಲ್ಲಿ ಜಮೀನಿನ ಪರಿಹಾರ ನೀಡುವುದಾಗಿಯೂ ಅಥವಾ 40:60ರ ಅನುಪಾತದಲ್ಲಿ ನಿವೇಶನ ನೀಡುವುದಾಗಿಯೂ ತಿಳಿಸಲಾಗಿತ್ತು. ಆದರೆ ಪ್ರಾಧಿಕಾರದ ಈ ಸಲಹೆಗೆ ಅವರು ಒಪ್ಪಿಗೆ ನೀಡದೇ ಇದ್ದು, ಬದಲಿ ಜಮೀನನ್ನು ನೀಡುವಂತೆ ಒತ್ತಾಯಿಸಿರುತ್ತಾರೆ.” ಇದು ಮೂಡಾ ದಾಖಲೆಯಲ್ಲಿರುವ ಒಕ್ಕಣೆ. ಇದಕ್ಕೆ ತಾವು ಏನಂತೀರಿ? ಎಂದು ಸಿದ್ದರಾಮಯ್ಯರನ್ನ ಪ್ರಶ್ನಿಸಿದ್ದಾರೆ.

ಇದು ತಮ್ಮ ಪ್ರಕಾರ ಟಿಪ್ಪಣಿಯೋ..? ಒಕ್ಕಣೆಯೋ..? ಅಥವಾ ಅಪ್ಪಣೆಯೋ..? ಸೂಪರ್ ಸಿಎಂ ಅವರೇ ‘ಒತ್ತಾಯಿಸಿರುತ್ತಾರೆ!!!’ ಎಂದರೆ ಮೂಡಾ ಅಧಿಕಾರಿಗಳು ಇನ್ನೇನು ಮಾಡಿಯಾರು? ಆಗ ತಾವು ರಾಜ್ಯದಲ್ಲಿ ಏನಾಗಿದ್ದಿರಿ? ವಿಧಾನಸೌಧದ 3ನೇ ಮಹಡಿಯಲ್ಲಿರುವ ಮುಖ್ಯಮಂತ್ರಿ ಕುರ್ಚಿಯಲ್ಲಿ ಕೂತಿದ್ದಿರಿ,ಈಗ ಹೇಳಿ.. ಯಾರ ತಟ್ಟೆಯಲ್ಲಿ ಏನು ಸತ್ತು ಬಿದ್ದಿದೆ? ಕಪ್ಪುಚುಕ್ಕೆಯನ್ನು ವೈಟ್ನರ್ ನುಂಗಿತ್ತಾ..?? ಎಂದು ಸಿದ್ದರಾಮಯ್ಯ ವಿರುದ್ಧ ದಾಖಲೆ ಹಾಕಿ ವಾಗ್ದಾಳಿ ನಡೆಸಿದ್ದಾರೆ.

ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ.

BC Suddi   About Us
For Feedback - [email protected]

Related News

LATEST Post

WhatsApp Icon Telegram Icon