ಬೆಂಗಳೂರು: ರಾಜ್ಯದ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ ಯುಪಿಎಸ್ಸಿ ಸೇರಿದಂತೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಯ ಉಚಿತ ತರಬೇತಿಗೆ ಅರ್ಜಿಯನ್ನು ರಾಜ್ಯ ಸರ್ಕಾರ ಆಹ್ವಾನಿಸಿದೆ.
ಈ ಕುರಿತಂತೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಯುಪಿಎಸ್ಸಿ ನಾಗರೀಕ ಸೇವೆ ಮತ್ತು ಬ್ಯಾಂಕಿಂಗ್ ಪಿಓ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ 2023-24ನೇ ಸಾಲಿನಲ್ಲಿ ಉಚಿತ ಪರೀಕ್ಷಾ ಪೂರ್ವ ತರಬೇತಿಯನ್ನು ನೀಡಲಾಗುತ್ತಿದೆ ಎಂದಿದೆ.
ಹಿಂದುಳಿದ ವರ್ಗಗಳಾದಂತ ಪ್ರವರ್ಗ-1, 2ಎ, 3ಎ, 3ಬಿ ವರ್ಗದವರಿಗೆ ಸೇರಿದಂತ ಅರ್ಹ ಅಭ್ಯರ್ಥಿಗಳಿಂದ ಉಚಿತ ತರಬೇತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಜಿಗಳನ್ನು ಆನ್ ಲೈನ್ ಮೂಲಕ ಅರ್ಹ ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಸಲ್ಲಿಸಬೇಕು ಎಂದು ತಿಳಿಸಿದೆ.
https://bcwd.karnataka.gov.in ಜಾಲತಾಣದ ಮೂಲಕ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ದಿನಾಂಕ 04-12-2023 ಕೊನೆಯ ದಿನಾಂಕವಾಗಿದೆ. ಈ ತರಬೇತಿಗೆ ಅರ್ಜಿ ಸಲ್ಲಿಸೋದಕ್ಕೆ ಪದವಿ ವ್ಯಾಸಂಗ ಮಾಡಿರಬೇಕು. ಹಿಂದುಳಿದ ವರ್ಗದವರು ಆಗಿರಬೇಕು ಎಂಬುದಾಗಿ ಹೇಳಿದೆ.