ಯುವ ರಾಜ್‌ಕುಮಾರ್ ಪತ್ನಿ ವಿರುದ್ಧ ಕೋರ್ಟ್ ಮೆಟ್ಟಿಲೇರಿದ ನಟಿ ಸಪ್ತಮಿ ಗೌಡ

ಬೆಂಗಳೂರು: ನಟ ಯುವ ರಾಜ್‌ಕುಮಾರ್ ಪತ್ನಿ ಶ್ರೀದೇವಿ ವಿರುದ್ಧ ನಟಿ ಸಪ್ತಮಿ ಗೌಡ ಅವರು ನ್ಯಾಯಾಲಯದ ಮೆಟ್ಟಿಲೇರಿದ್ದಾರೆ.

ನಟ ಯುವರಾಜ್ ಕುಮಾರ್ ಅವರು ಕೌಟುಂಬಿಕ ನ್ಯಾಯಾಲಯದಲ್ಲಿ ಪತ್ನಿ ಶ್ರೀದೇವಿಯಿಂದ ವಿಚ್ಛೇದನ ಕೋರಿ ಅರ್ಜಿ ಸಲ್ಲಿಸಿದ್ದರು. ಅಗೌರವ, ಮಾನಸಿಕ ಕ್ರೌರ್ಯದ ಆರೋಪ ಹೊರಿಸಿ ಅವರು ಪತ್ನಿಯಿಂದ ವಿಚ್ಛೇದನ ಕೋರಿದ್ದರು. ಜೊತೆಗೆ ಶ್ರೀದೇವಿ ಅವರ ಚಾರಿತ್ಯ್ರದ ಬಗ್ಗೆ ಅನುಮಾನ ಬರುವಂಥಹಾ ಆರೋಪಗಳನ್ನು ಮಾಡಿದ್ದರು.

ಪತಿಯ ಆರೋಪಗಳ ಬಳಿಕ ಪ್ರತಿಕ್ರಿಯೆ ನೀಡಿದ್ದ ಶ್ರೀದೇವಿ ಅವರು, ಪತಿ ಯುವ ವಿರುದ್ಧ ಅಕ್ರಮ ಸಂಬಂಧದ ಆರೋಪ ಮಾಡಿದ್ದರು. ಅಲ್ಲದೆ, ಸಪ್ತಮಿ ಗೌಡ ಹೆಸರನ್ನು ಸಹ ಪ್ರಕರಣದಲ್ಲಿ ಎಳೆದು ತಂದಿದ್ದರು. ಸಪ್ತಮಿ ಗೌಡ ಹಾಗೂ ಯುವರಾಜ್ ಪರಸ್ಪರ ಸಂಬಂಧದಲ್ಲಿದ್ದಾರೆ. ತಾವು ಅಮೆರಿಕಕ್ಕೆ ತೆರಳಿದಾಗ ಯುವ ಹಾಗೂ ಸಪ್ತಮಿ ಸಹಜೀವನ ನಡೆಸಿದ್ದಾರೆ. ಸಪ್ತಮಿಗಾಗಿ ನನ್ನನ್ನು ಮನೆಯಿಂದ ಹೊರಗೆ ಹಾಕುವ ಪ್ರಯತ್ನವೂ ನಡೆದಿತ್ತು ಎಂದು ಶ್ರೀದೇವಿ ಅವರು ಆರೋಪಿಸಿದ್ದರು.

Advertisement

ಇದೀಗ ನಟಿ ಸಪ್ತಮಿ ಗೌಡ, ಶ್ರೀದೇವಿ ವಿರುದ್ಧ ಕೋರ್ಟ್ ಮೆಟ್ಟಿಲೇರಿದ್ದಾರೆ. ತಮ್ಮ ವಿರುದ್ಧ ಶ್ರೀದೇವಿ ಅವರು ಮಾನಹಾನಿಕರ ಹೇಳಿಕೆ ನೀಡದಂತೆ ಕೋರ್ಟ್ ಮೆಟ್ಟಿಲೇರಿರುವ ಸಪ್ತಮಿ ಗೌಡ ನಿರ್ಬಂಧಕಾಜ್ಞೆ ನೀಡುವಂತೆ ಮನವಿ ಮಾಡಿದ್ದಾರೆ. ತಮ್ಮ ವಿರುದ್ಧ ಶ್ರೀದೇವಿ, ಇಲ್ಲ ಸಲ್ಲದ ಹೇಳಿಕೆ ನೀಡಿದ್ದಾರೆ. ಸುಳ್ಳು ಆರೋಪ ಹೊರಿಸಿದ್ದಾರೆ ಎಂದು ಸಪ್ತಮಿ ತಿಳಿಸಿದ್ದಾರೆ.

ಸಪ್ತಮಿ ಗೌಡ ಅವರ ಕೋರಿಕೆಯಂತೆ ಬೆಂಗಳೂರಿನ ಸಿಟಿ ಸಿವಿಲ್ ನ್ಯಾಯಾಲಯ ನಿರ್ಭಂದಕಾಜ್ಞೆ ಆದೇಶಿಸಿದೆ. ಜೊತೆಗೆ ಶ್ರೀದೇವಿ ಭೈರಪ್ಪ ಅವರಿಗೆ ನೊಟೀಸ್ ಜಾರಿ ಮಾಡುವಂತೆ ಆದೇಶ ಮಾಡಿದೆ.

 

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement