ಬೆಂಗಳೂರು: ಇಂದು ನಟ ರಮೇಶ್ ಅರವಿಂದ್ ಅವರಿಗೆ ಜನ್ಮದಿನದ ಸಂಭ್ರಮ. ಅವರ ಹುಟ್ಟುಹಬ್ಬದಂದೇ ಹೊಸ ಸಿನಿಮಾ ಅನೌನ್ಸ್ ಆಗಿದ್ದು, ಅದಕ್ಕೆ ‘ದೈಜಿ’ಎಂದು ಹೆಸರು ನೀಡಲಾಗಿದೆ.
’ದೈಜಿ’ ಸಿನಿಮಾಗೆ ವಿಭಾ ಕಶ್ಯಪ್ ಪ್ರೊಡಕ್ಷನ್ಸ್ ಬ್ಯಾನರ್ ಅಡಿಯಲ್ಲಿ ರವಿ ಕಶ್ಯಪ್ ನಿರ್ಮಾಪಕರಾಗಿದ್ದು, ಈ ಸಿನಿಮಾದ ಮೊದಲ ಪೋಸ್ಟರ್ ಗಮನ ಸೆಳೆಯುತ್ತಿದೆ.
‘ದೈಜಿ’ ಎಂಬುದಕ್ಕೆ ಬೇರೆ ಬೇರೆ ಭಾಷೆಗಳಲ್ಲಿ ಬೇರೆ ಬೇರೆ ರೀತಿಯ ಅರ್ಥಗಳಿವೆ. ಕೊಂಕಣಿ ಭಾಷೆಯಲ್ಲಿ ದೈಜಿ ಎಂದರೆ ರಕ್ತ ಸಂಬಂಧ. ಜಪಾನ್ನಲ್ಲಿ ದೈಜಿ ಎಂದರೆ ಬಹಳ ಕಾಳಜಿ ವಹಿಸಬೇಕಾದ ವಿಚಾರ ಎಂಬರ್ಥವಿದೆ.
ಇನ್ನು ‘ದೈಜಿ ಸಿನಿಮಾ ಹಾರರ್, ಮಿಸ್ಟರಿ ಶೈಲಿಯಲ್ಲಿ ಮೂಡಿ ಬರುತ್ತಿದ್ದು, ರವಿ ಕಶ್ಯಪ್ ವಿವರಿಸಿದ ನೈಜ ಘಟನೆಗಳನ್ನು ಆಧರಿಸಿ ಅಭಿಜಿತ್ ವೈ ಆರ್ ಮತ್ತು ಆಕಾಶ್ ಶ್ರೀವತ್ಸ ಅವರು ಸಿನಿಮಾಗೆ ಚಿತ್ರಕಥೆ ಬರೆದಿದ್ದಾರೆ ಎನ್ನಲಾಗಿದೆ.