ಬೆಂಗಳೂರು: ರಾಜ್ಯದಲ್ಲಿ ಕಳೆದ 6 ತಿಂಗಳಲ್ಲಿ ರಸ್ತೆ ಅಪಘಾತದಿಂದ 5830 ಮಂದಿ ಮೃತಪಟ್ಟಿರುವುದಾಗಿ ಎಡಿಜಿಪಿ ಅಲೋಕ್ ಕುಮಾರ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿ, ಆಗಸ್ಟ್ ತಿಂಗಳೊಂದರಲ್ಲೇ ಒಟ್ಟು 795 ರಸ್ತೆ ಅಪಘಾತಗಳು ಸಂಭವಿಸಿವೆ. ಹಿಂದಿನ ತಿಂಗಳ ಅಂಕಿ-ಅಂಶಗಳಿಗೆ ಹೋಲಿಸಿದರೆ ಮಾರಣಾಂತಿಕ ಅಪಘಾತಗಳ ಸಂಖ್ಯೆಯಲ್ಲಿ ಸ್ವಲ್ಪ ಮಟ್ಟಿಗೆ ಇಳಿಕೆಯಾಗಿದೆ. ಮೇ ತಿಂಗಳಲ್ಲಿ 1094 ಮಾರಣಾಂತಿಕ ಅಪಘಾತಗಳು ದಾಖಲಾಗಿದ್ದರೆ ಜೂನ್-ಜೂಲೈನಲ್ಲಿ ಕ್ರಮವಾಗಿ 965 ಮತ್ತು 805 ಸಾವು ಸಂಭವಿಸಿದೆ ಎಂದರು
ಅಂಕಿಅಂಶಗಳ ಪ್ರಕಾರ, ರಸ್ತೆ ಅಪಘಾತಗಳಲ್ಲಿ ಸಾವನ್ನಪ್ಪಿದವರಲ್ಲಿ ಶೇಕಡಾ 60 ರಷ್ಟು ಜನ ಬೈಕ್ ಸವಾರರು ಎಂಬುವುದು ಆಘಾತಕಾರಿ ಅಂಶವಾಗಿದೆ. ಮೂರನೇ ಎರಡರಷ್ಟು ಬೈಕ್ ಸವಾರರು ರಸ್ತೆಯಲ್ಲಿ ಹೋಗುವಾಗ ಹೆಲ್ಮೆಟ್ ಧರಿಸದೇ ಇರುವುದರಿಂದ ಅಪಘಾತದಲ್ಲಿ ಮೃತಪಟ್ಟಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.