ಬೆಂಗಳೂರು: ಲೈಂಗಿಕ ದೌರ್ಜನ್ಯ ಹಾಗೂ ಮಹಿಳೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ಬಂಧನದಲ್ಲಿರುವ ಜೆಡಿಎಸ್ ಶಾಸಕ ಹೆಚ್ ಡಿ ರೇವಣ್ಣ ಅವರ ವಿಚಾರಣೆ ತೀವ್ರವಾಗಿ ನಡೆಯುತ್ತಿದೆ. ವಿಚಾರಣೆ ವೇಳೆ ರಾಜಕೀಯ ಷಡ್ಯಂತ್ರ ನಡೆಸಿ ನನ್ನ ಬಂಧನವಾಗಿದೆ ಎಂದು ರೇವಣ್ಣ ತಿಳಿಸಿದ್ದಾರೆ.
ವಿಚಾರಣೆ ವೇಳೆ ಎಸ್ಐಟಿ ಅಧಿಕಾರಿಗಳು ಮಹಿಳೆಯನ್ನು ಬಲವಂತವಾಗಿ ದೈಹಿಕವಾಗಿ ಬಳಸಿಕೊಂಡ ಬಗ್ಗೆ ಪ್ರಶ್ನಿಸಿದಾಗ ಕಿಡ್ನ್ಯಾಪ್ಗೂ ನನಗೂ ಸಂಬಂಧವಿಲ್ಲ. ಕಿಡ್ನ್ಯಾಪ್ ಮಾಡಿ ಅಂತಾ ಯಾರಿಗೂ ಹೇಳಿಲ್ಲ ಎಂದು ಉತ್ತರಿಸಿದ್ದಾರೆ.
ಇನ್ನು ನನಗೂ ಕಿಡ್ನ್ಯಾಪ್ಗೂ ಸಂಬಂಧವಿಲ್ಲ ಎಂದಿರುವ ರೇವಣ್ಣ, ತಮ್ಮ ಸ್ವಇಚ್ಛಾ ಹೇಳಿಕೆಗೆ ಸಹಿ ಹಾಕಲು ಹಿಂದೇಟು ಹಾಕಿದ್ದಾರೆ. ಸದ್ಯ 4 ದಿನಗಳ ಕಾಲ ಎಸ್ಐಟಿ ಕಸ್ಟಡಿಯಲ್ಲಿರುವ ರೇವಣ್ಣಗೆ ಎಸ್ಐಟಿ ಅಧಿಕಾರಿಗಳು ಇನ್ನೂ ತೀವ್ರ ವಿಚಾರಣೆ ನಡೆಸಲಿದೆ.