ಬೆಂಗಳೂರು: ಕರಾವಳಿ ಸೇರಿದಂತೆ ಮಲೆನಾಡು ಭಾಗಗಳಲ್ಲಿ ಅಬ್ಬರಿಸುತ್ತಿರೋ ವರುಣನ ಆರ್ಭಟ ಕೊನೆಯಾಗುವ ಹಾಗೇ ಕಾಣಿಸುತ್ತಿಲ್ಲ. ಮುಂದಿನ ಎರಡ್ಮೂರು ದಿನ ಭಾರೀ ಮಳೆ ಮುನ್ಸೂಚನೆ ಸಿಕ್ಕಿದ್ದು ಕ್ರಮೇಣ ಎರಡ್ಮೂರು ದಿನದ ಬಳಿಕ ಮಳೆ ಪ್ರಮಾಣ ತಗ್ಗುವ ಸಾಧ್ಯತೆಯಿದೆ. ದಕ್ಷಿಣ ಗುಜರಾತ್, ಉತ್ತರ ಕೇರಳ ಕರಾವಳಿಯುದ್ದಕ್ಕೂ ಸಮುದ್ರ ಮಟ್ಟದಲ್ಲಿ ಟ್ರಫ್ ಮುಂದುವರಿಕೆ ಆಗಲಿದ್ದು, ಕರಾವಳಿ ಕರ್ನಾಟಕ ಮತ್ತು ಪಕ್ಕದ ಪಶ್ಚಿಮ ಘಟ್ಟಗಳ ಜಿಲ್ಲೆಗಳಲ್ಲಿ ಬಲವಾದ ಗಾಳಿ ಒಮ್ಮುಖ ಪರಿಣಾಮ ಭಾರೀ ಮಳೆ ಸಾಧ್ಯತೆಯಿದೆ. ಇಂದು ಮತ್ತು ನಾಳೆ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಭಾರೀಯಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆ ಮತ್ತು ನಿರಂತರ ಗಾಳಿಯ ವೇಗವು 40-50 ಕಿಮೀ ತಲುಪುವ ಸಾಧ್ಯತೆಯಿದೆ.