ಕಲಬುರಗಿ, ಬಾಗಲಕೋಟೆ, ಬಳ್ಳಾರಿ, ವಿಜಯನಗರ, ಬೀದರ್, ಕೊಪ್ಪಳ ಸೇರಿ ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಉಷ್ಣ ಅಲೆಯ ಮುನ್ನೆಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ.
ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ 40 ಡಿ.ಸೆ. ಏರಿಕೆಯಾಗಿರುವ ಹಿನ್ನಲೆ ಮುಂದಿನ 2 ದಿನ ಬಿಸಿ ಗಾಳಿಯ ತೀವ್ರತೆ ಕಂಡುಬರುವ ಮುನ್ಸೂಚನೆಯಿದೆ.
ಮುಂದಿನ 5 ದಿನ ಒಳನಾಡಿನ ಒಂದೆರಡು ಕಡೆ ಗರಿಷ್ಠ ತಾಪಮಾನ 2-3 ಡಿ.ಸೆ. ಹೆಚ್ಚಾಗುವ ಸಾಧ್ಯತೆಯಿದೆ.
ಆರೋಗ್ಯದ ದೃಷ್ಟಿಯಿಂದ ಜನರು ಬಿಸಿಲಿನ ತೀವ್ರತೆ ಬಗ್ಗೆ ಮುಂಜಾಗ್ರತೆ ವಹಿಸುವಂತೆ ಆರೋಗ್ಯ ಇಲಾಖೆ ಕೂಡ ತಿಳಿಸಿದೆ.