ಬೆಂಗಳೂರು: ಬಿಪಿಎಲ್ ಕಾರ್ಡುದಾರರಿಗೆ ಸರ್ಕಾರ ಆಗಾಗಾ ಗುಡ್ ನ್ಯೂಸ್ ನೀಡುತ್ತಲೇ ಇರುತ್ತದೆ. ಇನ್ನೂ ಇದೀಗ ರಾಜ್ಯದಲ್ಲಿ ಡೆಂಗ್ಯೂ ಉಲ್ಬಣಿಸುತ್ತಿದ್ದು, ಈ ಹಿನ್ನೆಲೆ ಇದೀಗ ಮುಂಜಾಗ್ರತಾ ಕ್ರಮವಾಗಿ ಸರ್ಕಾರವು ಬಿಪಿಎಲ್ ಕಾರ್ಡುದಾರರಿಗೆ ಉಚಿತವಾಗಿ ಸೊಳ್ಳೆ ಪರದೆ ವಿತರಣೆ ಮಾಡಲು ಮುಂದಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ರಾಜ್ಯದಲ್ಲಿ ಡೆಂಗ್ಯೂ ಜ್ವರ ಪರಿಸ್ಥಿತಿಯ ಸೂಕ್ಷ್ಮ ಮೇಲ್ವಿಚಾರಣೆಗೆ ವಾರ್ ರೂಮ್ ಪ್ರಾರಂಭಿಸಿ, ಡೆಂಘಿ ಪೀಡಿತರ ಮೇಲೆ 14 ದಿನಗಳು ನಿಗಾ ವಹಿಸಬೇಕು ಎಂದು ಆರೋಗ್ಯ ಇಲಾಖೆಯು ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದೆ. ಆರೋಗ್ಯ ಸೌಧದಲ್ಲಿರುವ ರಾಷ್ಟ್ರೀಯ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಕಾರ್ಯಕ್ರಮ ವಿಭಾಗವು ರಾಜ್ಯಮಟ್ಟದ ವಾರ್ ರೂಮ್ ಉಸ್ತುವಾರಿ ಹೊಂದಿರಲಿದೆ.
ಬಿಬಿಎಂಪಿ ಹಾಗೂ ಜಿಲ್ಲಾಡಳಿತಗಳು ಅಧಿಕ ಪ್ರಕರಣಗಳು ವರದಿಯಾದ ಪ್ರದೇಶ ಗುರುತಿಸಿ, ವಿವರವನ್ನು ರಾಜ್ಯ ಮಟ್ಟದ ವಾರ್ ರೂಮ್‌ಗೆ ಸಲ್ಲಿಕೆ ಮಾಡಬೇಕು. ಹೆಚ್ಚು ಪ್ರಕರಣಗಳು ವರದಿಯಾದ ಪ್ರದೇಶಗಳಲ್ಲಿ ಲಾರ್ವಾ ನಾಶ ಚಟುವಟಿಕೆಗಳನ್ನು ತೀವ್ರಗೊಳಿಸಬೇಕು. ಜ್ವರ ಕ್ಲಿನಿಕ್‌ಗಳನ್ನು ತುರ್ತಾಗಿ ಪ್ರಾರಂಭ ಮಾಡಬೇಕು. ಬಿಪಿಎಲ್ ಕುಟುಂಬಗಳಿಗೆ ಸೊಳ್ಳೆ ಪರದೆ ವಿತರಣೆ ಮಾಡಬೇಕು ಎಂದು ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಹರ್ಷ ಗುಪ್ತ ಸುತ್ತೋಲೆ ಹೊರಡಿಸಿದ್ದಾರೆ ಎಂದು ತಿಳಿದುಬಂದಿದೆ.































