ರಾಜ್ಯದಲ್ಲಿ ದುಪ್ಪಟ್ಟಾಗುತ್ತಿರುವ ಡೆಂಗ್ಯೂ ಪ್ರಕರಣ

ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದು. ಇಲ್ಲಿಯವರೆಗೆ 15 ಸಾವಿರದ ಪ್ರಕರಣಗಳ ಗಡಿ ದಾಟಿದೆ. ಈಗಾಗಲೇ ಡೆಂಗ್ಯೂ ನಿಂದಾಗಿ 9 ಮಂದಿ ಮೃತಪಟ್ಟಿರುವುದಾಗಿ ವರದಿಯಾಗಿದೆ.

ರಾಜ್ಯದಲ್ಲಿ ಒಟ್ಟು 15,089 ಮಂದಿ ಡೆಂಗ್ಯೂಗೆ ತುತ್ತಾಗಿದ್ದಾರೆ. ಇದರಲ್ಲಿ ಬಿಬಿಎಂಪಿ ವ್ಯಾಪ್ತಿಯಲ್ಲಿ 4 ಹಾಗೂ ಕೊಡಗು, ಹಾಸನ, ತುಮಕೂರು ವ್ಯಾಪ್ತಿಯಲ್ಲಿ ತಲಾ ಒಬ್ಬರು, ಉಡುಪಿಯಲ್ಲಿ ಇಬ್ಬರು ಮೃತಪಟ್ಟಿದ್ದಾರೆ. 2021ರಲ್ಲಿ 6,300 ಪ್ರಕರಣ ದಾಖಲಾಗಿದ್ದು, ಐವರು ಮೃತಪಟ್ಟಿದ್ದರು. 2022ರಲ್ಲಿ 8,500 ಪ್ರಕರಣ ಪಾಸಿಟಿವ್ ಇದ್ದು, 9 ಮಂದಿ ಸಾವಿಗೀಡಾಗಿದ್ದರು.ರಾಜ್ಯದಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ಡೆಂಗ್ಯೂ ಪ್ರಕರಣಗಳ ಸಂಖ್ಯೆ ದುಪ್ಪಟ್ಟಾಗಿದೆ.

ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ಭಾರೀ ಸಂಖ್ಯೆಯಲ್ಲಿ ಏರಿಕೆಯಾಗುತ್ತಿವೆ. ಕೇವಲ ಆರೋಗ್ಯ ಇಲಾಖೆಯಿಂದ ಮಾತ್ರ ಇದನ್ನು ನಿಯಂತ್ರಿಸಲು ಸಾಧ್ಯವಿಲ್ಲ. ಸಾರ್ವಜನಿಕರೂ ಸಹಕಾರ ನೀಡಬೇಕು ಎಂದು ಡಾ| ಸುದರ್ಶನ ಬಲ್ಲಾಳ್, ಮಣಿಪಾಲ ಆಸ್ಪತ್ರೆ ಅಧ್ಯಕ್ಷ ಮಾಹಿತಿಯನ್ನು ನೀಡಿದ್ದಾರೆ.

Advertisement

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement