ಲೋಕಸಭೆ ಚುನಾವಣೆ ಬಳಿಕ ರಾಜ್ಯ ಸರ್ಕಾರವು ಪಂಚ ಗ್ಯಾರಂಟಿಗಳ ಆರ್ಥಿಕ ಹೊರೆಯಿಂದ ತಪ್ಪಿಸಿಕೊಳ್ಳುವುದಕ್ಕೆ ಮದ್ಯದ ಬೆಲೆಯಲ್ಲಿ ಏರಿಕೆ ಮಾಡಲು ಚಿಂತನೆ ನಡೆಸಿದೆ.
ತಮಿಳುನಾಡು, ಆಂಧ್ರ, ತೆಲಂಗಾಣ, ಮಹಾರಾಷ್ಟ್ರ, ಕೇರಳಕ್ಕೆ ಹೋಲಿಸಿದರೆ ಕರ್ನಾಟಕದಲ್ಲಿ ಹಲವು ಸ್ಲ್ಯಾಬ್‌ಗಳ ಅಗ್ಗದ ಮದ್ಯದ ಬೆಲೆ ತುಂಬಾ ಕಡಿಮೆಯಿದೆ.
ಸೆಮಿ ಪ್ರೀಮಿಯಂ &ಪ್ರೀಮಿಯಂ ವಿದೇಶಿ ಮದ್ಯಕ್ಕೆ ಹೋಲಿಸಿದರೆ ಅಗ್ಗದ ಮದ್ಯಗಳ ಮಾರಾಟ ನಮ್ಮಲ್ಲಿ ಜಾಸ್ತಿಯಿದೆ. ಹೀಗಾಗಿ 12-15% ದರ ಹೆಚ್ಚಳಕ್ಕೆ ಮುಂದಾಗಿದ್ದು ಅಬಕಾರಿ ಇಲಾಖೆ ಈ ದಿಕ್ಕಿನಲ್ಲಿ ಸಿದ್ಧತೆ ನಡೆಸಿದೆ ಎಂದು ಮೂಲಗಳು ತಿಳಿಸಿವೆ.