ರಾಜ್ಯದಲ್ಲಿ ಮಧ್ಯಾಹ್ನ 3ಗಂಟೆ ವೇಳೆಗೆ 50.93 ಶೇಕಡಾವಾರು ಮತದಾನ

ಬೆಂಗಳೂರು: ರಾಜ್ಯದಲ್ಲಿ 3ಗಂಟೆ ವರೆಗೆ 50.93 ಪ್ರತಿಶತ ಮತದಾರರು ಮತ ಚಲಾಯಿಸಿದ್ದಾರೆ ಎಂದು ಚುನಾವಣಾ ಆಯೋಗ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.ರಾಜ್ಯದಲ್ಲಿನ 14 ಕ್ಷೇತ್ರಗಳಲ್ಲಿ ಮತದಾನ ಪ್ರಕ್ರಿಯೆ ನಡೆಯುತ್ತಿದೆ. ಉಡುಪಿ- ಚಿಕ್ಕಮಗಳೂರು ಕ್ಷೇತ್ರದಲ್ಲಿ ಶೇ. 57.49, ಹಾಸನ ಕ್ಷೇತ್ರದಲ್ಲಿ ಶೇ. 55.92, ದಕ್ಷಿಣ ಕನ್ನಡ ಕ್ಷೇತ್ರದಲ್ಲಿ ಶೇ. 58.76, ಚಿತ್ರದುರ್ಗ ಕ್ಷೇತ್ರದಲ್ಲಿ ಶೇ. 52.14, ತುಮಕೂರು ಕ್ಷೇತ್ರದಲ್ಲಿ ಶೇ. 56.62, ಮಂಡ್ಯ ಕ್ಷೇತ್ರದಲ್ಲಿ ಶೇ. 57.44, ಮೈಸೂರು ಕ್ಷೇತ್ರದಲ್ಲಿ ಶೇ. 53.55, ಚಾಮರಾಜನಗರ ಕ್ಷೇತ್ರದಲ್ಲಿ ಶೇ. 54.82, ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಶೇ. 49.62, ಬೆಂಗಳೂರು ಉತ್ತರ ಕ್ಷೇತ್ರದಲ್ಲಿ ಶೇ. 41.12, ಬೆಂಗಳೂರು ಕೇಂದ್ರ ಕ್ಷೇತ್ರದಲ್ಲಿ ಶೇ. 40.10, ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಶೇ. 40.77 ಹಾಗೂ ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಶೇ. 55.90ರಷ್ಟು ಮತದಾರರು ಮತ ಚಲಾಯಿಸಿದ್ದಾರೆ.

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement