ಬೆಂಗಳೂರು: ರಾಜ್ಯದಲ್ಲಿ ಇಂದು 328 ಮಂದಿಗೆ ಕೊರೊನಾ ದೃಢ ಪಟ್ಟಿದ್ದು, ಈ ಮೂಲಕ ಕೊರೊನಾ ಸಕ್ರಿಯ ಪ್ರಕರಣಗಳ ಸಂಖ್ಯೆ 1,159 ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ರಾಜ್ಯದಲ್ಲಿ ಇಂದು ಒಟ್ಟು 7,205 ಮಂದಿಯನ್ನು ಕೊರೊನಾ ತಪಾಸಣೆಗೆ ಒಳಪಡಿಸಲಾಗಿತ್ತು, ಈ ಪೈಕಿ 328 ಮಂದಿಯಲ್ಲಿ ಕೊರೊನಾ ಪಾಸಿಟಿವ್ ಇರುವುದು ಪತ್ತೆಯಾಗಿದೆ. ಸಕ್ರಿಯ ಪ್ರಕರಣಗಳ ಪೈಕಿ 1,087 ಮಂದಿ ಸೋಂಕಿತರು ಮನೆಯಲ್ಲಿ ಕ್ವಾರಂಟೈನ್ ಆಗಿದ್ದಾರೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ 72 ಮಂದಿ ಸೋಂಕಿತರ ಪೈಕಿ 9 ಮಂದಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಐಸಿಯುನಲ್ಲಿರುವವರ ಪೈಕಿ ಮೂವರು ವೆಂಟಿಲೇಟರ್ ಮೂಲಕ ಉಸಿರಾಡುತ್ತಿರುವುದಾಗಿ ತಿಳಿದುಬಂದಿದೆ.
ಬೆಂಗಳೂರು ನಗರದಲ್ಲಿ 163 ಮಂದಿಯಲ್ಲಿ ಕೋವಿಡ್ ಸೋಂಕು ದೃಢಪಟ್ಟಿದ್ದು, ಇಂದು 409 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಬೆಂಗಳೂರನ್ನು ಹೊರತು ಪಡಿಸಿ ಬಾಗಲಕೋಟೆ 4, ಬಳ್ಳಾರಿ 9, ಬೆಂಗಳೂರು ಗ್ರಾಮಾಂತರ 18, ಚಾಮರಾಜನಗರ 5, ಚಿಕ್ಕಬಳ್ಳಾಪುರ 10, ಚಿಕ್ಕಮಗಳೂರು 7, ಚಿತ್ರದುರ್ಗ 5, ದಕ್ಷಿಣ ಕನ್ನಡ 8, ದಾವಣಗೆರೆ 3, ಧಾರವಾಡ 2, ಗದಗ 1, ಹಾಸನ 12, ಹಾವೇರಿ 1, ಕಲಬುರಗಿ 4, ಕೋಲಾರ 1, ಮಂಡ್ಯ 7, ಮೈಸೂರು 26, ರಾಯಚೂರು 4, ರಾಮನಗರ 3 ಶಿವಮೊಗ್ಗ 6, ತುಮಕೂರು 15, ಉಡುಪಿ 1, ಉತ್ತರ ಕನ್ನಡ 6, ವಿಜಯನಗರದಲ್ಲಿ 7 ಸಕ್ರೀಯ ಪ್ರಕರಣಗಳು ದಾಖಲಾಗಿವೆ.