ಬೆಂಗಳೂರು: ರಾಜ್ಯದ ಮೊದಲ ಹಂತದ 14 ಲೋಕಸಭಾ ಕ್ಷೇತ್ರಗಳಲ್ಲಿ 358 ಅಭ್ಯರ್ಥಿಗಳಿಂದ 492 ನಾಮಪತ್ರಗಳು ಸಲ್ಲಿಕೆಯಾಗಿದ್ದು, ಆ ಪೈಕಿ 13 ಕ್ಷೇತ್ರಗಳ ಪರಿಶೀಲನೆ ಕಾರ್ಯ ಶುಕ್ರವಾರ ಪೂರ್ಣಗೊಂಡಿದೆ.
ಅದರಂತೆ 276 ನಾಮಪತ್ರ ಕ್ರಮಬದ್ಧವಾಗಿದ್ದು, 60 ನಾಮಪತ್ರಗಳು ತಿರಸ್ಕೃತಗೊಂಡಿವೆ. ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಮಾತ್ರ ಪರಿಶೀಲನೆ ಕಾರ್ಯ ತಡರಾತ್ರಿವರೆಗೆ ನಡೆದಿದ್ದು, ಇನ್ನಷ್ಟೇ ವಿವರ ಲಭ್ಯವಾಗಬೇಕಿದೆ.
ಏ.8ರಂದು ನಾಮಪತ್ರ ಹಿಂತೆಗೆದುಕೊಳ್ಳಲು ಕೊನೆಯದಿನವಾಗಿದ್ದು, ಆ ಬಳಿಕ ಚುನಾವಣಾ ಕಣದಲ್ಲಿ ಎಷ್ಟು ಮಂದಿ ಉಳಿಯುತ್ತಾರೆ ಎನ್ನುವುದು ಸ್ಪಷ್ಟವಾಗಲಿದೆ.
ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 13 ಅಭ್ಯರ್ಥಿಗಳು, 19 ಉಮೇದುವಾರಿಕೆ ಸಲ್ಲಿಕೆ ಮಾಡಿದ್ದಾರೆ. ಇದರಲ್ಲಿ 10 ನಾಮಪತ್ರಗಳು ಕ್ರಮಬದ್ಧವಾಗಿದೆ, 4 ತಿರಸ್ಕೃತಗೊಂಡಿವೆ. ದಕ್ಷಿಣ ಕನ್ನಡ ಕ್ಶೇತ್ರದಲ್ಲಿ 11 ಅಭ್ಯರ್ಥಿಗಳು 21 ನಾಮಪತ್ರ ಸಲ್ಲಿಸಿದ್ದು 10 ಕ್ರಮಬದ್ಧವಾಗಿದೆ.