ಮೈಸೂರು: ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟ ಪರಿಣಾಮ, ಬರಗಾಲ ಆವರಿಸಿದೆ. ಈ ಹಿನ್ನಲೆಯಲ್ಲಿ ಹೊರ ರಾಜ್ಯಗಳಿಗೆ ಕರ್ನಾಟಕದಿಂದ ಮೇವು ಸಾಗಾಣಿಕೆಯನ್ನು ನಿಷೇಧ ಮಾಡಲಾಗಿದೆ. ಎಂದು ಪಶುಸಂಗೋಪನೆ ಮತ್ತು ರೇಷ್ಮೆ ಸಚಿವ ಕೆ.ವೆಂಕಟೇಶ್ ಹೇಳಿದರು.
ರಾಜ್ಯದಲ್ಲಿ ಬರಗಾಲ ಪರಿಸ್ಥಿತಿ ಉಂಟಾಗಿರುವ ಹಿನ್ನಲೆಯಲ್ಲಿ ಹೊರ ರಾಜ್ಯಗಳಿಗೆ ಮೇವು ಸಾಗಾಣೆ ಮಾಡುವುದನ್ನು ನಿಷೇಧಿಸಿ ಆದೇಶ ನೀಡಲಾಗುವುದು ಅಂತ ತಿಳಿಸಿದರು.
ರಾಜ್ಯದಲ್ಲಿ ಸದ್ಯಕ್ಕೆ 1.16 ಕೋಟಿ ರಾಸುಗಳಿದ್ದು, 7 ತಿಂಗಳಿಗೆ ಆಗುವಷ್ಟು ಮೇವು ದಾಸ್ತಾನಿದೆ. ಆದರೂ ಮುನ್ನೆಚ್ಚರಿಕೆ ಕ್ರಮವಾಗಿ ಮೇವಿಗೆ ಯಾವುದೇ ತೊಂದರೆ ಆಗದಂತೆ ಎಚ್ಚರಿಕೆಯ ಸಲುವಾಗಿ ಹೊರ ರಾಜ್ಯಗಳಿಗೆ ಮೇವು ಸಾಗಾಣೆ ನಿಷೇಧಿಸಲಾಗಿದೆ ಎಂದರು.
ಮೇವು ಬೆಳೆಯುವ ಸಲುವಾಗಿ ಶೀಘ್ರವೇ ರಾಜ್ಯದ ರೈತರಿಗೆ ಉಚಿತವಾಗಿ ಮೇವು ಬಿತ್ತನೆ ವಿತರಣೆ ಮಾಡಲಾಗುತ್ತದೆ. ಚರ್ಮಗಂಟು ರೋಗ ಮಹಾರಾಷ್ಟ್ರ ಗಡಿಭಾಗದಲ್ಲಿ ಮತ್ತೆ ಕಾಣಿಸಿಕೊಂಡಿದ್ದು, ನಿಯಂತ್ರಣ ಕ್ರಮ ವಹಿಸಲಾಗುತ್ತದೆ ಎಂದು ಹೇಳಿದರು.