ಬೆಂಗಳೂರು : ರಾಜ್ಯದ ಆರು ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಯಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಕರ್ನಾಟಕದ ಬೀದರ್, ಕಲಬುರಗಿ, ಯಾದಗಿರಿ, ಕರಾವಳಿಯ ದಕ್ಷಿಣ ಕನ್ನಡ ಹಾಗೂ ರಾಮನಗರ, ತುಮಕೂರಿನಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆ ಇರುವುದರಿಂದ ‘ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ. ಇನ್ನು ರಾಜ್ಯಾದ್ಯಂತ ಮುಂದಿನ ಏಳು ದಿನ ಮಳೆಯಾಗುವ ಸಾಧ್ಯತೆ ಇದೆ.
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮುಂದಿನ ಆರು ದಿನಗಳ ಕಾಲ ಮಳೆಯಾಗಲಿದೆ. ಸೆ.25 ಮತ್ತು ಸೆ.28 ರಂದು ಬಿರುಗಾಳಿ ಸಹಿತ ಮಳೆಯಾಗುವ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ದಕ್ಷಿಣ ಒಳನಾಡು ಜಿಲ್ಲೆಗಳಾದ ಬಳ್ಳಾರಿ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ಶಿವಮೊಗ್ಗ, ವಿಜಯನಗರದಲ್ಲಿ ಇಂದು ಬಿರುಗಾಳಿ ಬೀಸಲಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಗುಡುಗು ಮತ್ತು ಬಿರುಗಾಳಿ ಸಹಿತ ಇಂದು ಮಳೆಯಾಗುತ್ತದೆ.