ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಡಿ ಬರುವ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದಿಂದ 2024-25ನೇ ಸಾಲಿನ ವಿವಿಧ ಯೋಜನೆಗಳಿಗೆ ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಮಹಿಳಾ ನಿಗಮದಿಂದ ಅರ್ಜಿ ಆಹ್ವಾನಿಸಿದ ಯೋಜನೆಗಳ ವಿವರ ಹೀಗಿದೆ:
1) ಉದ್ಯೋಗಿ ಯೋಜನೆ
2) ಚೇತನ ಯೋಜನೆ
3) ಧನ್ಯಶ್ರೀ ಯೋಜನೆ
4) ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆ
5) ಮಾಜಿ ದೇವದಾಸಿ ಮಹಿಳೆಯರ ಪುನರ್ವಸತಿ ಯೋಜನೆ
ಉದ್ಯೋಗಿ ಯೋಜನೆ ಸಹಾಯಧನ ವಿವರ:
A) ಸಾಮಾನ್ಯ ವರ್ಗದವರಿಗೆ:
ಸಾಮಾನ್ಯ ವರ್ಗದವರಿಗೆ ಒಟ್ಟು 3 ಲಕ್ಷದವರೆಗೆ ಬ್ಯಾಂಕ್ ಮೂಲಕ ಸಾಲ ಪಡೆಯಲು ಅವಕಾಶವಿದ್ದು ಈ ಸಾಲಕ್ಕೆ ಶೇ 30% ವರೆಗೆ ನಿಗಮದಿಂದ ಸಹಾಯಧನವನ್ನು ನೀಡಲಾಗುತ್ತದೆ.
B) ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಫಲಾನುಭವಿಗಳಿಗೆ:
ಉದ್ಯೋಗಿನಿ ಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಫಲಾನುಭವಿಗಳಿಗೆ ಕನಿಷ್ಟ 1 ಲಕ್ಷ ದಿಂದ ಗರಿಷ್ಟ 3 ಲಕ್ಷದವರೆಗೆ ಬ್ಯಾಂಕ್ ಮೂಲಕ ಸಾಲ ಪಡೆದುಕೊಂಡು ಈ ಸಾಲಕ್ಕೆ ಶೇ 50% ವರೆಗೆ ನಿಗಮದಿಂದ ಸಹಾಯಧನವನ್ನು ಪಡೆಯಬಹುದು.
2) ಚೇತನ ಯೋಜನೆ:
ಚೇತನ ಯೋಜನೆಯಡಿ ಸ್ವ-ಉದೋಗವನ್ನು ಮಾಡಿಕೊಂಡು ಆದಾಯ ತೆಗೆದುಕೊಳ್ಳಲು ಆಸಕ್ತಿಯಿರುವ ಅರ್ಹ ಮಹಿಳೆಯರಿಗೆ ರೂ 30,000/- ಸಾವಿರ ಪ್ರೋತ್ಸಾಹಧನ ನೀಡಲಾಗುತ್ತದೆ.
3) ಧನ್ಯಶ್ರೀ ಯೋಜನೆ:
ಧನ್ಯಶ್ರೀ ಯೋಜನೆಯಡಿ ಅರ್ಜಿ ಸಲ್ಲಿಸಲು ಅರ್ಹ ಮಹಿಳೆಯರು ಸ್ವಂತ ಉದ್ದಿಮೆಯನ್ನು ಆರಂಭಿಸಲು ರೂ 30,000/- ಅರ್ಥಿಕ ನೆರವನ್ನು ಪಡೆಯಬಹುದು.
4) ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆ:
ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆಯ ಮೂಲಕ ಅರ್ಹ ಮಹಿಳಾ ಫಲಾನುಭವಿಗಳಿಗೆ ಆದಾಯೋತ್ಪನ್ನ ಚಟುವಟಿಕೆಗಳನ್ನು ಕೈಗೊಳ್ಳಲು ರೂ 30,000/- ಪ್ರೋತ್ಸಾಹಧನವನ್ನು ನೀಡಲಾಗುತ್ತದೆ.
5) ಮಾಜಿ ದೇವದಾಸಿ ಮಹಿಳೆಯರ ಪುನರ್ವಸತಿ ಯೋಜನೆ:
ಮಾಜಿ ದೇವದಾಸಿ ಮಹಿಳೆಯರ ಪುನರ್ವಸತಿ ಯೋಜನೆಯಡಿ ಅರ್ಹರಿಗೆ ಅಂದರೆ 1993-94 ಮತ್ತು 2007-08ರ ಸಮೀಕ್ಷೆಯಲ್ಲಿ ಗುರುತಿಸಿರುವ ಮಾಜಿ ದೇವದಾಸಿ ಮಹಿಳೆಯರಿಗೆ ಆದಾಯೋತ್ಪನ್ನ ಚಟುವಟಿಕೆ ಕೈಗೊಳ್ಳಲು ರೂ 30,000/- ಪ್ರೋತ್ಸಾಹಧನ ನೀಡಲಾಗುತ್ತದೆ.
ಅರ್ಜಿ ಸಲ್ಲಿಕೆ ಆರಂಭ: 21 ಆಗಸ್ಟ್ 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 21 ಸೆಪ್ಟಂಬರ್ 2024
ಎಲ್ಲಿ ಅರ್ಜಿ ಸಲ್ಲಿಸಬೇಕು?
ಈ ಮೇಲೆ ವಿವರಿಸಿರುವ ಎಲ್ಲಾ ಯೋಜನೆಗಳಿಗೆ ಅರ್ಹ ಅರ್ಜಿದಾರರು ಸೇವಾ ಸಿಂಧು ಪೋರ್ಟಲ್ ಮೂಲಕ ಅಥವಾ ಬಾಪೂಜಿ ಸೇವಾ ಕೇಂದ್ರ, ಗ್ರಾಮ ಒನ್, ಬೆಂಗಳೂರು ಒನ್, ಕರ್ನಾಟಕ ಒನ್ ಕೇಂದ್ರಗಳನ್ನು ಭೇಟಿ ಮಾಡಿ ಅರ್ಜಿಯನ್ನು ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ಲಿಂಕ್: https://sevasindhu.karnataka.gov.in/Sevasindhu/Kannada?ReturnUrl=%2F
ಅರ್ಜಿ ಸಲ್ಲಿಸಲು ಅಗತ್ಯ ದಾಖಲೆಗಳು:
1) ಅರ್ಜಿದಾರರ ಆಧಾರ್ ಕಾರ್ಡ ಪ್ರತಿ.
2) ಬ್ಯಾಂಕ್ ಪಾಸ್ ಬುಕ್.
3) ರೇಶನ್ ಕಾರ್ಡ.
4) ಪೋಟೊ.
5) ಜಾತಿ ಮತ್ತು ಆದಾಯ ಪ್ರಮಾಣ ಪತ್ರ.
ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ