ಬೆಂಗಳೂರು: ಶಕ್ತಿ ಯೋಜನೆಗೆ ರಾಜ್ಯದಾದ್ಯಂತ ಅಪಾರ ಸ್ಪಂದನೆ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ 5675 ಹೊಸ ಬಸ್ ಖರೀದಿಯ ಗುರಿ ಹೊಂದಲಾಗಿದ್ದು, ಈ ಕುರಿತು ಶೀಘ್ರವೇ ಕ್ರಮ ಕೈಗೊಳ್ಳುವಂತೆ ಸಿಎಂ ಸಿದ್ದರಾಮಯ್ಯ ಅವರು ಸೂಚಿಸಿದ್ದಾರೆ.
ಪ್ರಸಕ್ತ ಆಯವ್ಯಯದಲ್ಲಿ ಹೊಸ ಬಸ್‌ಗಳ ಖರೀದಿಗೆ 500 ಕೋಟಿ ರೂ. ಒದಗಿಸಲಾಗಿದ್ದು, ಖರೀದಿ ಪ್ರಕ್ರಿಯೆಯನ್ನು ಶೀಘ್ರವೇ ಪೂರ್ಣಗೊಳಿಸಲು ಸೂಚಿಸಿದ ಅವರು, ಹೆಚ್ಚುವರಿ ಶೆಡ್ಯೂಲ್ ಗಳನ್ನು ಸೇರಿಸಲು ಅನುವಾಗುವಂತೆ ಹಾಗೂ ಪ್ರಯಾಣಿಕರಿಗೆ ಉತ್ತಮ ಸೇವೆ ಒದಗಿಸಲು ಅನುವಾಗುವಂತೆ ಬಸ್‌ಗಳನ್ನು ಸೇರ್ಪಡೆಗೊಳಿಸುವಂತೆ ಹೇಳಿದ್ದಾರೆ.
ಇದೇ ವೇಳೆ ಸಾರಿಗೆ ಇಲಾಖೆಯ ರಾಜಸ್ವ ಗುರಿ ಸಂಗ್ರಹ ಹಾಗೂ ಸಾರಿಗೆ ನಿಗಮಗಳ ಹಣಕಾಸು ನಿರ್ವಹಣೆ ಕುರಿತಂತೆ ಸಭೆಯಲ್ಲಿ ಚರ್ಚೆ ನಡೆಸಲಾಯಿತು. ವಾಹನ ತನಿಖೆಯಿಂದ 83 ಕೋಟಿ ರೂ. ದಂಡ ಸಂಗ್ರಹ ಮಾಡಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು