ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು, ನಾಳೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.
ದಕ್ಷಿಣ ಒಳನಾಡಿನ ಚಾಮರಾಜನಗರ, ಮಂಡ್ಯ, ಹಾಸನ ಮತ್ತು ಮೈಸೂರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಕೋಲಾರ ಮತ್ತು ತುಮಕೂರು ಜಿಲ್ಲೆಗಳಿಗೆ ಹಳದಿ ಎಚ್ಚರಿಕೆ ನೀಡಲಾಗಿದೆ.
ಅಕ್ಟೋಬರ್ 22ರವರೆಗೂ ರಾಜ್ಯದಲ್ಲಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ವರದಿಯಲ್ಲಿ ತಿಳಿಸಿದೆ. ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಕೂಡ ಉತ್ತಮ ಮಳೆಯಾಗಲಿದ್ದು, ಮಲೆನಾಡು ಪ್ರದೇಶದಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಅಕ್ಟೋಬರ್ 18ರವರೆಗೂ ವ್ಯಾಪಕ ಮಳೆಯ ಮುನ್ಸೂಚನೆ ಇದ್ದು, ಬಳಿಕ ಮಳೆ ಪ್ರಮಾಣ ಕಡಿಮೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.