ಬೆಂಗಳೂರು: ಮಹಾನಗರ ಪಾಲಿಕೆ ಜೊತೆಗೆ ರಾಜ್ಯದ ಹತ್ತು ಮಹಾನಗರ ಪಾಲಿಕೆಗಳ ನೌಕರರ ಸಂಘದಿಂದ ಇಂದು ಸಭೆ ನಡೆಸಲಾಗುತ್ತಿದೆ. ಇಂದು ಖಾಸಗಿ ಹೋಟೆಲ್‌ನಲ್ಲಿ ಸಭೆ ನಡೆಸಿ ಪ್ರತಿಭಟನೆ ಬಗ್ಗೆ ನೌಕರರ ಸಂಘಟನೆ ಚರ್ಚೆ ನಡೆಸಲಿದೆ. ಹಲವಾರು ಬಾರಿ ಮಹಾನಗರ ಪಾಲಿಕೆ ನೌಕರರು ಸಮಸ್ಯೆಗಳ ಬಗ್ಗೆ ಮನವಿ ಮಾಡಿದ್ರು ನಗರಾಭಿವೃದ್ಧಿ ಇಲಾಖೆ ಸಚಿವರಿಂದ ಸ್ಪಂದನೆ ಸಿಗದ ಹಿನ್ನೆಲೆ ಮಹಾನಗರ ಪಾಲಿಕೆಗಳ ಕೆಲಸ ಸ್ಥಗಿತಗೊಳಿಸಿ ಪ್ರತಿಭಟನೆ ಮಾಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ.
ಕರ್ನಾಟಕ ರಾಜ್ಯ ಮಹಾನಗರ ಪಾಲಿಕೆ ವೃಂದ ಮತ್ತು ನೇಮಕಾತಿ ನಿಯಾಮವಳಿ ತಿದ್ದುಪಡಿ ಮಾಡಬೇಕು. ರಾಜ್ಯ ಸರ್ಕಾರಿ ನೌಕರರಿಗೆ ಜಾರಿ ಮಾಡಿರುವಂತೆ ಆರೋಗ್ಯ ಸೌಲಭ್ಯವನ್ನು ಮಹಾನಗರ ಪಾಲಿಕೆ ನೌಕರರಿಗೆ ಜಾರಿಮಾಡ ಬೇಕು.. ಕರ್ನಾಟಕ ರಾಜ್ಯ ಸರ್ಕಾರಿ ನೌಕರರಿಗೆ ಜಾರಿಮಾಡಿರುವಂತೆ ಕೆ.ಜಿ.ಐ.ಡಿ ಮತ್ತು ಜಿ.ಪಿ.ಎಫ್ ಯೋಜನೆಯನ್ನು ಜಾರಿ ತರಬೇಕು. ಕರ್ನಾಟಕ ರಾಜ್ಯ ಸರ್ಕಾರಿ ನೌಕರರಿಗೆ ಪ್ರತಿ ವರ್ಷವೂ ಕ್ರೀಡಾಕೂಟಗಳನ್ನು ಏರ್ಪಡಿಸುವ ಮಾದರಿಯಲ್ಲೇ ಮಹಾನಗರ ಪಾಲಿಕೆ ನೌಕರರಿಗೆ ಕ್ರೀಡಾಕೂಟಗಳನ್ನು ಏರ್ಪಡಿಸಬೇಕು ಅನ್ನೋ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಸಭೆ ನಡೆಸಲಾಗುತ್ತಿದೆ.