ಬೆಂಗಳೂರು: ರಾಜ್ಯದ 5,8 ಮತ್ತು 9ನೇ ತರಗತಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್, ಮೌಲ್ಯಾಂಕ ದಾಖಲಿಸಿ ಮುಂದಿನ ತರಗತಿಗಳಿಗೆ ದಾಖಲಿಸುವಂತೆ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ.
5,8 ಮತ್ತು 9 ನೇ ತರಗತಿ SA -2 ಮೌಲ್ಯಾಂಕನ ಕಾರ್ಯ ಮುಗಿದಿದ್ದು, ಫಲತಾಂಶವಾನ್ನು ಪ್ರಕಟಿಸಲು ಸುಪ್ರೀಂ ಕೋರ್ಟ್ ತಡೆಯಾಜ್ಞೆಯನ್ನು ನೀಡಿದ್ದು ಅಂತಿಮ ತೀರ್ಪು ಬಾಕಿ ಉಳಿದಿತ್ತು. ಈ ಹಿನ್ನೆಲೆ 2023-24ನೇ ಸಾಲಿನಲ್ಲಿ ವ್ಯಾಸಂಗ ಮಾಡಿದ 5,8 ಮತ್ತು 9 ನೇ ತರಗತಿಯ ವಿದ್ಯಾರ್ಥಿಗಳ ಫಲಿತಾಂಶ ಪ್ರಕಟಿಸದೆ ಇದ ಕಾರಣ, ವಿದ್ಯಾರ್ಥಿಗಳನ್ನು ಮುಂದಿನ ಶೈಕ್ಷಣಿಕ ವರ್ಷಕ್ಕೆ ದಾಖಲು ಮಾಡಲು ಅಡ್ಡಿಯಾಗುತ್ತಿತ್ತು. ಅಷ್ಟೇ ಅಲ್ಲದೆ ಮಕ್ಕಳ ವರ್ಗಾವಣೆ ಪ್ರಮಾಣಪತ್ರ, ಪ್ರಗತಿ ಪತ್ರ , ವಿತರಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ 2023-24 ಸಾಲಿನ 5,8 ಮತ್ತು 9 ನೇ ತರಗತಿಯ ಮಕ್ಕಳ ಶೈಕ್ಷಣಿಕ ಹಿತದೃಷ್ಟಿಯಿಂದ ಈಗಾಗಲೇ ಶಾಲೆಗಳಲ್ಲಿ ನಡೆಸಿದ FA- 1, 2, 3, 4 ಹಾಗೂ SA-1 ಮೌಲ್ಯಾಂಕವನ್ನು ಪರಿಗಣಿಸಿ ಫಲಿತಾಂಶ ಪ್ರಕಟಿಸುವಂತೆ ಶಾಲೆಗಳಿಗೆ ಶಾಲಾ ಶಿಕ್ಷಣ ಇಲಾಖೆ ಸೂಚನೆ ನೀಡಿದೆ.