ಬೆಂಗಳೂರು : ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕುಟುಂಬಕ್ಕೆ ಸಿಎ ಸೈಟ್ ಹಂಚಿಕೆ ಬಗ್ಗೆ ರಾಜ್ಯಪಾಲರಿಗೆ ಬಿಜೆಪಿ ದೂರು ನೀಡಿತ್ತು. ಈ ಹಿನ್ನೆಲೆಯಲ್ಲಿ ರಾಜ್ಯಪಾಲ ಥಾವರ್ ಚೆಂದ್ ಗೆಹ್ಲೋಟ್ ಖರ್ಗೆ ಕುಟುಂಬದ ವಿರುದ್ಧ ಬಂದಿರುವ ದೂರಿನ ಬಗ್ಗೆ ದಾಖಲೆ ಸಹಿತ ವಿವರವಾದ ಮಾಹಿತಿ ನೀಡುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ.
ಮಲ್ಲಿಕಾರ್ಜುನ ಖರ್ಗೆ ಕುಟುಂಬಕ್ಕೆ ಸೇರಿದ ಸಿದ್ದವಿಹಾರ ಟ್ರಸ್ಟ್‌ಗೆ KIADB ಸಿಎ ನಿವೇಶನ ನೀಡಿರುವ ಬಗ್ಗೆ ಬಿಜೆಪಿ ವಿಧಾನಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ರಾಜ್ಯಪಾಲರನ್ನ ಭೇಟಿ ಮಾಡಿ ದೂರು ನೀಡಿತ್ತು. ಛಲವಾದಿ ದೂರು ಹಿನ್ನೆಲೆಯಲ್ಲಿ ಪ್ರಕರಣದ ಹೆಚ್ಚಿನ ವಿವರಣೆಯನ್ನ ನೀಡುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ರಾಜ್ಯಪಾಲರು ಪತ್ರ ಬರೆದಿದ್ದಾರೆ ಈ ಮೂಲಕ ಕುಮಾರಸ್ವಾಮಿ, ಮುರುಗೇಶ್ ನಿರಾಣಿ, ಜನಾರ್ದನ ರೆಡ್ಡಿ, ಶಶಿಕಲಾ ಜೊಲ್ಲೆ ಪ್ರಾಸಿಕ್ಯೂಷನ್‌ಗೆ ಅನುಮತಿ ಕೇಳಿದ್ದ ಕಾಂಗ್ರೆಸ್ ಗೆ ರಾಜ್ಯಪಾಲರ ಚೆಕ್‌ಮೇಟ್ ನೀಡಿದಂತಾಗಿದೆ.
ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ.