ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸುವ ಕೃತ್ಯವೊಂದು ಬೆಳಕಿಗೆ ಬಂದಿದ್ದು, ಬೆಂಗಳೂರಿನ ನೆಲಮಂಗಲದ ಸಮೀಪವಿರುವ ಖಾಸಗಿ ಆಸ್ಪತ್ರೆಯಲ್ಲಿ ಬರೋಬ್ಬರಿ 73 ಭ್ರೂಣ ಹತ್ಯೆ ಮಾಡಿರುವ ಅಮಾನವೀಯ ಪ್ರಕರಣ ಬಯಲಾಗಿದೆ.
ಡಾ. ರವಿಕುಮಾರ್ ಎಂಬವರಿಗೆ ಸೇರಿರುವ ಆಸರೆ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದ್ದು ಆರೋಗ್ಯ ಇಲಾಖೆ ಅಧಿಕಾರಿಗಳು ಆಸ್ಪತ್ರೆ ಮೇಲೆ ದಾಳಿ ಮಾಡಿದಾಗ ಈ ನೀಚ ಕೃತ್ಯ ಗೊತ್ತಾಗಿದೆ.
ಇದು ಕರ್ನಾಟಕದಲ್ಲಿ ನಡೆದಿರುವ ದೊಡ್ಡ ಮಟ್ಟದ ಭ್ರೂಣಹತ್ಯೆ ಪ್ರಕರಣವಾಗಿದ್ದು, ಸರ್ಕಾರ ಇದನ್ನು ಎಷ್ಟೊಂದು ಗಂಭೀರವಾಗಿ ಪರಿಗಣಿಸುತ್ತದೆ ಎಂಬುದನ್ನು ಕಾದು ನೋಡಬೇಕು.