ಬೆಂಗಳೂರು : ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ನಡೆದಿದ್ದು, ರಾಜ್ಯದ ಬೇರೆ ಬೇರೆ ಕಡೆಗಳಲ್ಲಿ ಕರ್ತವ್ಯವನ್ನು ನಿರ್ವಹಿಸುತ್ತಿರುವ ನಾಲ್ವರು ಐಎಎಸ್ ಅಧಿಕಾರಿಗಳನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ರಾಜ್ಯ ಸರ್ಕಾರದಲ್ಲಿ ವರ್ಗಾವಣೆ ಪ್ರಕ್ರಿಯೆ ಮುಂದುವರೆದಿದ್ದು, ಸಾರ್ವಜನಿಕ ಹಿತದೃಷ್ಟಿಯಿಂದ ಮತ್ತು ಆಡಳಿತಾತ್ಮಕವಾಗಿ ಅನುಕೂಲವಾಗಲೆಂಬ ಕಾರಣಕ್ಕಾಗಿ ನಾಲ್ವರು ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ.
