ಬೆಂಗಳೂರು: ರಾಜ್ಯದಲ್ಲಿ ಕಾರ್ಯ ನಿರ್ವಹಿಸುತ್ತಿರುವ ನಿವೃತ್ತ ನೌಕರರಿಗೆ ಸರ್ಕಾರ ದೊಡ್ಡ ಆಘಾತ ನೀಡಿದೆ.
ಸರ್ಕಾರದ ಸಚಿವಾಲಯ ಮತ್ತು ವಿವಿಧ ಇಲಾಖೆಗಳಲ್ಲಿ ಗುತ್ತಿಗೆ ಹಾಗೂ ಹೊರಗುತ್ತಿಗೆ ಆಧಾರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ನಿವೃತ್ತಿಯಾಗಿರುವ ಅಧಿಕಾರಿ ಹಾಗೂ ನೌಕರರಿಗೆ ಈ ಕೂಡಲೇ ಕೆಲಸದಿಂದ ಬಿಡುಗಡೆ ಮಾಡುವಂತೆ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯೆಲ್ ಆದೇಶಿಸಿದ್ದಾರೆ.
ಅವರು ನಿರ್ವಹಿಸುತ್ತಿದ್ದ ಕೆಲಸದ ಜಾಗದಲ್ಲಿ ಹಾಲಿ ಸರ್ಕಾರಿ ಅಧಿಕಾರಿ ನೌಕರರನ್ನೇ ನಿಯೋಜಿಸುವಂತೆ ಆದೇಶದಲ್ಲಿ ತಿಳಿಸಲಾಗಿದೆ.