ರಾಯಚೂರು: ಗ್ಯಾರಂಟಿಗಳನ್ನು ನೀಡುತ್ತೇವೆಂದು ಸಿಎಂ ಸಿದ್ದರಾಮಯ್ಯ ರಾಜ್ಯದ ಖಜಾನೆ ಖಾಲಿ ಮಾಡಿದ್ದಾರೆಂದು ಮಾಜಿ ಸಿಎಂ B.S.ಯಡಿಯೂರಪ್ಪ ಆರೋಪಿಸಿದ್ದಾರೆ.
ರಾಯಚೂರಿನಲ್ಲಿ ಮಾತನಾಡಿ, ಖಜಾನೆ ಖಾಲಿಯಾಗಿರುವ ಬಗ್ಗೆ ಸರ್ಕಾರವೇ ಒಪ್ಪಿಕೊಂಡಿದೆ ಎಂದ ಅವರು, ರಾಜ್ಯದಲ್ಲಿ ಗೊಂದಲಮಯ ವಾತಾವರಣವಿದೆ. ನಮ್ಮ ಸರ್ಕಾರವಿದ್ದಾಗ ಬಾಕಿ ಬಿಲ್ ಪಾವತಿಯಾಗಿಲ್ಲ ಎನ್ನುತ್ತಿದ್ದ ಗುತ್ತಿಗೆದಾರರು, ಈಗಲೂ ಹಾಗೆಯೇ ಆರೋಪಿಸುತ್ತಾ ಅಭಿವೃದ್ಧಿ ಕಾಮಗಾರಿ ನಿಲ್ಲಿಸುತ್ತೇವೆಂದು ಹೇಳುತ್ತಿದ್ದಾರೆ ಎಂದರು.