ಬೆಂಗಳೂರು : ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ ಬಳಿಕ ರಾಜ್ಯಪಾಲ ಮತ್ತು ರಾಜ್ಯ ಸರ್ಕಾರದ ನಡುವೆ ಸಂಘರ್ಷ ಸೃಷ್ಟಿಯಾಗಿದೆ ಇದ್ರ ನಡುವೆ ಕಳೆದ 8 ತಿಂಗಳಲ್ಲಿ 11 ವಿಧೇಯಕಗಳನ್ನ ರಾಜ್ಯಪಾಲರು ವಾಪಸ್ ಕಳುಹಿಸಿದ್ದಾರೆ.
ಇದು ರಾಜ್ಯ ಸರ್ಕಾರ ಮತ್ತು ರಾಜ್ಯಪಾಲರ ನಡುವೆ ಮತ್ತೊಂದು ಸಂಘರ್ಷಕ್ಕೆ ಕಾರಣವಾಗಿದೆ. ಕರ್ನಾಟಕ ಸಾರ್ವಜನಿಕ ಪರೀಕ್ಷಾ ವಿಧೇಯಕ, ಕರ್ನಾಟಕ ಧಾರ್ಮಿಕ ದತ್ತಿ ವಿಧೇಯಕ, ಕರ್ನಾಟಕ ಟೌನ್ ಅಂಡ್ ಕಂಟ್ರಿ ಪ್ಲಾನಿಂಗ್ ವಿಧೇಯಕ, ಕರ್ನಾಟಕ ಶಾಸಕಾಂಗ ಸದಸ್ಯರ ವಿಧೇಯಕ, ಕರ್ನಾಟಕ ಪುರಸಭೆಗಳು ಮತ್ತು ಕೆಲ ಇತರೆ ಕಾನೂನು ವಿಧೇಯಕ, ಚಲನಚಿತ್ರ ಮತ್ತು ಸಾಂಸ್ಕೃತಿಕ ಕಲಾವಿದರ ಕಲ್ಯಾಣ ವಿಧೇಯಕ, ಕರ್ನಾಟಕ ಸೌಹಾರ್ದ ಸಹಕಾರಿ ವಿಧೇಯಕ, ರೇಣುಕಾ ಯಲ್ಲಮ್ಮ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರ ವಿಧೇಯಕ, ಗದಗ ಬೆಟಗೇರಿ ವ್ಯಾಪಾರ ಸಂಸ್ಕೃತಿ ಪ್ರದೇಶನ ಪ್ರಾಧಿಕಾರ ವಿಧೇಯಕ ಮತ್ತು ಕರ್ನಾಟಕ ನೊಂದಣಿ ವಿಧೇಯಕ ಗಳನ್ನ ರಾಜ್ಯಪಾಲರು ಸ್ಪಷ್ಟನೆ ಕೇಳಿ ವಾಪಸ್ ಕಳುಹಿಸಿದ್ದಾರೆ. ಹೀಗೆ ರಾಜ್ಯಪಾಲರು ವಿಧೇಯಕಗಳಿಗೆ ಸ್ಪಷ್ಟನೆ ಕೇಳಿ ವಾಪಸ್ ಕಳಿಸಿರೋದಕ್ಕೆ ರಾಜ್ಯ ಸರ್ಕಾರ ಮತ್ತು ರಾಜ್ಯಪಾಲರ ನಡುವೆ ಮತ್ತೊಂದು ಸಂಘರ್ಷಕ್ಕೆ ಎಡೆಮಾಡಿಕೊಟ್ಟಿದೆ.
ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ