ರಾಮನಗರ ಜಿಲ್ಲೆಗೆ ಬೆಂಗಳೂರು ದಕ್ಷಿಣ ಎಂದು ಹೆಸರಿಡಲು ರಾಜ್ಯ ಸಂಪುಟ ಸಭೆ ತೀರ್ಮಾನ ಕೈಗೊಂಡಿದೆ. ಬೆಂಗಳೂರು ದಕ್ಷಿಣ ಎಂದು ಹೆಸರಿಟ್ಟರೆ ದೊಡ್ಡ ಮಟ್ಟದ ಅಭಿವೃದ್ಧಿ ಸಾಧ್ಯ ಎಂದು ಸರ್ಕಾರ ಪ್ರತಿಪಾದಿಸುತ್ತಿದೆ. ಸಂಪುಟ ಸಭೆಯ ಬಳಿಕ ಎಚ್.ಕೆ.ಪಾಟೀಲ ಹೇಳಿಕೆ ನೀಡಿದ್ದು,ರಾಮನಗರ ಜಿಲ್ಲೆಯ ಹೆಸರು ಬದಲಾವಣೆಯ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಹೆಸರು ಬದಲಾವಣೆಯ ಪ್ರಸ್ತಾಪವನ್ನು ಡಿ.ಕೆ.ಶಿವಕುಮಾರ ಮಾಡಿದ ದಿನದಿಂದಲೇ ವಿಪಕ್ಷಗಳು ವಿರೋಧ ವ್ಯಕ್ತಪಡಿಸುತ್ತಿದೆ.