ಅಯೋಧ್ಯಾ: ರಾಮಮಂದಿರದ ಉದ್ಘಾಟನೆಯ ದಿನ ಹತ್ತಿರವಾಗುತ್ತಿದೆ ಉದ್ಘಾಟನಾ ಸಮಾರಂಭಕ್ಕೆ ಹಾಜರಾಗದಂತೆ ರಾಮಮಂ ದಿರ ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಬಿಜೆಪಿಯ ಹಿರಿಯ ನಾಯಕರಾದ ಎಲ್ ಕೆ ಅಡ್ವಾಣಿ ಮತ್ತು ಮುರಳಿ ಮನೋಹರ್ ಜೋಶಿ ಅವರಿಗೆಮನವಿ ಮಾಡಿದ್ದಾರೆ.
90 ರ ದಶಕದಲ್ಲಿ ರಾಮ ಮಂದಿರ ಚಳವಳಿಯ ನೇತೃತ್ವ ವಹಿಸಿದ್ದ ಬಿಜೆಪಿ ಹಿರಿಯರಾದ ಎಲ್.ಕೆ. ಅಡ್ವಾಣಿ ಹಾಗೂ ಮುರಳಿ ಮನೋಹರ್ ಜೋಷಿ ಅವರು ಜನವರಿಯಲ್ಲಿ ಅಯೋಧ್ಯೆಯಲ್ಲಿ ನಡೆಯಲಿರುವ ಪ್ರಾಣ ಪ್ರತಿಷ್ಠಾ” ಸಮಾರಂಭಕ್ಕೆ ಗೈರಾಗುವ ಸಾಧ್ಯತೆ ಇದೆ.
ಈ ಕುರಿತು ಸ್ಪಷ್ಟನೆ ನೀಡಿದ ಚಂಪತ್ ರಾಯ್ ಆರೋಗ್ಯ ಮತ್ತು ವಯೋಸಹಜ ಕಾರಣಗಳಿಂದಾಗಿ ಮುರಳಿ ಮನೋಹರ್ ಜೋಶಿ ಮತ್ತು ಅಡ್ವಾಣಿ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಲು ಸಾಧ್ಯವಾಗುವುದಿಲ್ಲ ಎಂದು ತಿಳಿಸಿದ್ದಾರೆ. ಇಬ್ಬರೂ ಹಿರಿಯರು. ಆದ್ದರಿಂದ ಅವರ ವಯಸ್ಸನ್ನು ಪರಿಗಣಿಸಿ ಬರದಂತೆ ಮನವಿ
ಮಾಡಲಾಗಿದ್ದು, ಅದಕ್ಕೆ ಇಬ್ಬರೂ ಸಮ್ಮತಿ ಸೂಚಿಸಿದ್ದಾರೆ ಎಂದು ಹೇಳಿದ್ದಾರೆ.
ಪ್ರಾಣ ಪ್ರತಿಷ್ಠೆ” ಪೂಜೆಯು ಜನವರಿ 16 ರಂದು ಪ್ರಾರಂಭವಾಗಲಿದೆ. ಇದು ಜನವರಿ 22 ರವರೆಗೆ ನಡೆಯಲಿದೆ ಎಂದು ತಿಳಿಸಿದ್ದಾರೆ.ಜನವರಿ 22 ರಂದು ನಡೆಯಲಿರುವ ಉದ್ಘಾಟನಾ ಸಮಾರಂಭಕ್ಕೆ ಸಿದ್ಧತೆಗಳು ಅಂತಿಮ ಹಂತದಲ್ಲಿವೆ ಈ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ ಮುಖ್ಯ ಅತಿಥಿಯಾಗಿ ಆಗಮಿಸಲಿದ್ದಾರೆ ಎಂದು ಅವರು ಹೇಳಿದರು.