ರಾಮಮಂದಿರ ಉದ್ಘಾಟನೆ ಆಮಂತ್ರಣ ವಿವಾದಕ್ಕೆ ಅಡ್ವಾಣಿ, ಎಂ ಎಂ ಜೋಷಿ ಸ್ಪಷ್ಟನೆ

ಆಯೋಧ್ಯೆ : ದೇಶದಲ್ಲಿ ಇನ್ನು ಕೆಲವೇ ದಿನಗಳಲ್ಲಿ ಅಯೋಧ್ಯೆ ರಾಮ ಮಂದಿರ ಉದ್ಘಾಟನೆ ಹಾಗೂ ಪ್ರಾಣಪ್ರತಿಷ್ಠೆ ಆಗಲಿದ್ದು ವಯಸ್ಸಿನ ಕಾರಣದಿಂದ ಎಲ್‌ಕೆ ಅಡ್ವಾಣಿ ಹಾಗೂ ಮುರಳಿ ಮನೋಹರ್ ಜೋಶಿ ಅವರನ್ನು ಆಗಮಿಸದಂತೆ ಮನವಿ ರಾಮ ಮಂದಿರ ಟ್ರಸ್ಟ್ ಮನವಿ ಮಾಡಿದ ಬೆನ್ನಲ್ಲೇ ಭಾರಿ ಆಕ್ರೋಶ ವ್ಯಕ್ತವಾಗಿತ್ತು. ಈ ಎಲ್ಲಾ ಬೆಳವಣಿಗೆ ಬೆನ್ನಲ್ಲೇ ಇದೀಗ ಇಬ್ಬರು ನಾಯಕರ ಅಭಿಪ್ರಾಯ ಹಾಗೂ ಈ ವಿವಾದ ಕುರಿತ ಸ್ಪಷ್ಟನೆಯನ್ನು ವಿಶ್ವಹಿಂದೂ ಪರಿಷತ್ ಬಹಿರಂಗಪಡಿಸಿದೆ.

ರಾಮ ಮಂದಿರ ಆಂದೋಲನ, ಹೋರಾಟದಲ್ಲಿ ಬಿಜೆಪಿ ಹಿರಿಯ ನಾಯಕ ಎಲ್‌ಕೆ ಅಡ್ವಾಣಿ ಹಾಗೂ ಮುರಳಿ ಮನೋಹರ್ ಜೋಶಿ ದೇಶದ ಮೂಲೆ ಮೂಲೆಯಲ್ಲಿ ರಾಮ ಭಕ್ತರನ್ನು ಸಂಘಟಿಸಿ ಹೋರಾಟ ನಡೆಸಿದ ನಾಯಕರು. ಬಾಬ್ರಿ ಮಸೀದಿ ಧ್ವಂಸ ಪ್ರಕರಣದಲ್ಲಿ ಅಡ್ವಾನಿ ಹಾಗೂ ಜೋಶಿ ಸತತ ವಿಚಾರಣೆ ಸೇರಿದಂತೆ ಹಲವು ಸಂಕಷ್ಟ ಎದುರಿಸಿದ್ದಾರೆ. ಆದರೆ ವಯಸ್ಸಿನ ಕಾರಣದಿಂದ ರಾಮ ಮಂದಿರ ಪ್ರಾಣಪ್ರತಿಷ್ಠಿಗೆ ಬರಬೇಡಿ ಎಂದು ರಾಮ ಮಂದಿರ ಟ್ರಸ್ಟ್ ಮನವಿ ಮಾಡಿದ ಘಟನೆ ಭಾರಿ ವಿರೋಧಕ್ಕೆ ಕಾರಣವಾಗಿತ್ತು.

ಇದೀಗ ರಾಮ ಮಂದಿರ ಪ್ರಾಣ ಪ್ರತಿಷ್ಠೆಗೆ ಇಬ್ಬರನ್ನು ಭೇಟಿಯಾಗಿ ಆಹ್ವಾನಿಸಲಾಗಿದೆ. ಜನವರಿ 22 ರಂದು ನಡೆಯಲಿರುವ ರಾಮ ಮಂದಿರ ಪ್ರಾಣ ಪ್ರತಿಷ್ಠೆ ಹಾಗೂ ಉದ್ಘಾಟನೆಗೆ ಆಹ್ವಾನ ನೀಡಲಾಗಿದ್ದು ಈ ವೇಳೆ ಇಬ್ಬರು ಐತಿಹಾಸಿಕ ಕ್ಷಣದಲ್ಲಿ ಪಾಲ್ಗೊಳ್ಳಲು ಶಕ್ತಿ ಮೀರಿ ಪ್ರಯತ್ನಿಸುವುದಾಗಿ ಹೇಳಿದ್ದಾರೆ ಎಂದು ವಿಶ್ವ ಹಿಂದೂ ಪರಿಷತ್ ಸ್ಪಷ್ಟನೆ ನೀಡಿದೆ.

Advertisement

ಎಲ್‌ಕೆ ಅಡ್ವಾಣಿಗೆ 96 ವರ್ಷ ವಯಸ್ಸಾಗಿದ್ದರೆ, ಮುರಳಿ ಮನೋಹರ್ ಜೋಶಿಗೆ 90 ವರ್ಷ . ಈ ಕಾರಣದಿಂದ ರಾಮ ಮಂದಿರ ಟ್ರಸ್ಟ್ ಸದಸ್ಯರು, ಕುಟುಂಬಸ್ಥರ ಜೊತೆ ಮಾತುಕತೆ ನಡೆಸಿದ್ದರು. ವಯಸ್ಸಿನ ಕಾರಣದಿಂದ ಉದ್ಘಾಟನಾ ಸಮಾರಂಭಕ್ಕೆ ಆಗಮಿಸುವುದು ಕಷ್ಟವಾಗಲಿದೆ. ಆದರೆ ಅಂತಿಮ ನಿರ್ಧಾರವನ್ನು ಕುಟುಂಬಸ್ಥರು ಚರ್ಚಿಸಿ ತೆಗೆದುಕೊಳ್ಳಿ ಎಂದು ಟ್ರಸ್ಟ್ ಮನವಿ ಮಾಡಿದೆ.

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement