ಅಯೋಧ್ಯೆ: ಶ್ರೀರಾಮಂದಿರ ಲೋಕಾರ್ಪಣೆಗೆ ಇನ್ನು 18 ದಿನಗಳು ಮಾತ್ರ ಉಳಿದಿದ್ದು, ಕಾರ್ಯಕ್ರಮಕ್ಕೆ ಭದ್ರತೆಯ ಬಗ್ಗೆಯೂ ಹೆಚ್ಚಿನ ನಿಗಾ ವಹಿಸಲಾಗಿದೆ.
ಅಯೋಧ್ಯೆ ಮದುವಣಗಿತ್ತಿಯಂತೆ ಸಿಂಗಾರಗೊಳ್ಳುತ್ತಿದ್ದು, ಇದರೊಂದಿಗೆ ಜ.22ರಂದು ನಡೆಯಲಿರುವ ಕಾರ್ಯಕ್ರಮಕ್ಕೆ ಭದ್ರತೆಯ ಬಗ್ಗೆಯೂ ಹೆಚ್ಚಿನ ನಿಗಾ ವಹಿಸಲಾಗಿದೆ.
ಇನ್ನು ಜ.22 ರಂದು ಪ್ರಧಾನಿ ಮೋದಿ ಅವರು ಆಗಮಿಸುವ ಹಿನ್ನೆಲೆಯಲ್ಲಿ ಭದ್ರತೆಯ ಬಗ್ಗೆ ಹೆಚ್ಚಿನ ನಿಗಾ ವಹಿಸಲಾಗಿದೆ. ಅಂದು ಕೃತಕ ಬುದ್ಧಿಮತ್ತೆಯೊಂದಿಗೆ 11,000 ರಾಜ್ಯ ಪೊಲೀಸರು ಮತ್ತು ಅರೆಸೇನಾ ಪಡೆಗಳನ್ನು ನಿಯೋಜಿಸಲಾಗುತ್ತದೆ ಎಂದು ಹೇಳಲಾಗಿದೆ.