ಬೆಂಗಳೂರು: ರಾಮೇಶ್ವರಂ ಕೆಫೆಯ ಬಾಂಬ್ ಬ್ಲಾಸ್ಟ್ ಪ್ರಕರಣದ ಮೊದಲ ಆರೋಪಿಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆಯ ಅಧಿಕಾರಿಗಳು ಗುರುವಾರ ಬಂಧಿಸಿದ್ದಾರೆ.
ಬಾಂಬ್ ತಯಾರಿಕೆಯ ಪ್ರಮುಖ ಆರೋಪಿ ಮುಜಾಮುಲ್ ಶರೀಫ್ ಬಂಧಿತ ಆರೋಪಿ.
ಎನ್‌ಐಎ ಅಧಿಕಾರಿಗಳು 3 ರಾಜ್ಯಗಳ ಹಲವು ಸ್ಥಳಗಳಲ್ಲಿ ದಾಳಿ ನಡೆಸಿದ್ದು, ಇದೀಗ ಪ್ರಮುಖ ಸಂಚುಕೋರನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಕುರಿತಂತೆ ಟ್ವೀಟ್ ಮಾಡಿರುವ ಎನ್‌ಐಎ ಆರೋಪಿಯನ್ನು ಬಂಧಿಸಿರುವುದಾಗಿ ಖಚಿತಪಡಿಸಿದೆ.
ರಾಜ್ಯದ 12 ಸ್ಥಳಗಳಲ್ಲಿ, ತಮಿಳುನಾಡಿನ 5 ಮತ್ತು ಉತ್ತರ ಪ್ರದೇಶದ 1 ಸೇರಿದಂತೆ ಒಟ್ಟು 18 ಸ್ಥಳಗಳಲ್ಲಿ ಎನ್‌ಐಎ ತಂಡಗಳು ದಾಳಿ ನಡೆಸಿತ್ತು. ದಾಳಿಯ ಬಳಿಕ ಆರೋಪಿ ಮುಜಾಮಿಲ್ ಶರೀಫ್ ನನ್ನು ಬಂಧಿಸಿರುವುದಾಗಿ ಎನ್‌ಐಎ ಟ್ವೀಟ್ ಮಾಡಿದೆ.
ಬಾಂಬ್ ಬ್ಲಾಸ್ಟ್ ಪ್ರಕರಣದಲ್ಲಿ ಗುರುತಿಸಲಾದ ಇತರ ಇಬ್ಬರು ಆರೋಪಿಗಳಿಗೆ ಮುಜಾಮಿಲ್ ಶರೀಫ್ ಕೀ ಕಾಂನ್ಸಪರೇಟರ್ ಆಗಿದ್ದ ಎಂದು ತನಿಖೆಯ ಮೂಲಕ ತಿಳಿದುಬಂದಿದೆ. ಇನ್ನು ಆರೋಪಿಯ ಬಳಿ ಇದ್ದ ವಿವಿಧ ಸಾಧನಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಎನ್‌ಐಎ ತಿಳಿಸಿದೆ.