ಬೆಂಗಳೂರು: ರಾಮ ಮಂದಿರಕ್ಕೆ ನಮ್ಮ ಸರ್ಕಾರ ಮತ್ತು ಪಕ್ಷದ ಸಂಪೂರ್ಣ ಬೆಂಬಲವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಅಯೋಧ್ಯೆ ರಾಮಮಂದಿರ ಉದ್ಘಾಟನೆ ವಿಚಾರವನ್ನು ಬಿಜೆಪಿ ರಾಜಕೀಯ ಲಾಭಕ್ಕೆ ಬಳಸಿಕೊಳ್ಳುತ್ತಿದೆ ಎಂದು ವಿರೋಧ ಪಕ್ಷದ ನಾಯಕರು ಆರೋಪಿಸಿರುವ ಬೆನ್ನಲ್ಲೇ ರಾಮ ಮಂದಿರದ ಪರ ಹೇಳಿಕೆ ನೀಡಿರುವ ಸಿದ್ದರಾಮಯ್ಯ, ರಾಮಮಂದಿರವನ್ನು ನಾವು ವಿರೋಧಿಸಲ್ಲ, ಮಂದಿರ ನಿರ್ಮಾಣಕ್ಕೆ ನಮ್ಮ ವಿರೋಧವಿಲ್ಲ. ನಾವು ರಾಮಮಂದಿರದ ಪರವಾಗಿದ್ದೇವೆ ಎಂದರು.
ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಮತ ಗಳಿಸಲು ಕೇಂದ್ರದ ಬಿಜೆಪಿ ಸರ್ಕಾರ ರಾಮಮಂದಿರ ಉದ್ಘಾಟನೆಯನ್ನು ಬಳಸಿಕೊಂಡಿದೆ ಎಂದು ಸಿದ್ದರಾಮಯ್ಯ ಸಂಪುಟದ ಸಚಿವರು ಆರೋಪಿಸಿದ್ದಾರೆ.
ಕಳೆದ ಲೋಕಸಭೆ ಚುನಾವಣೆಯಲ್ಲಿ ಮತ ಗಳಿಸಲು ಬಿಜೆಪಿ ಸರ್ಕಾರ ಪುಲ್ವಾಮಾ ಭಯೋತ್ಪಾದನಾ ದಾಳಿಯನ್ನು ಬಳಸಿಕೊಂಡಿತ್ತು. ಇದೀಗ ಭಗವಾನ್ ರಾಮನ ಮತ್ತು ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆಯನ್ನು ಬಳಸಿಕೊಳ್ಳುತ್ತಿದ್ದಾರೆ ಎಂದು ಸಚಿವ ಸುಧಾಕರ್ ಆರೋಪಿಸಿದ್ದಾರೆ.