ಅಯೋಧ್ಯೆ: ರಾಮ ಮಂದಿರದ ಆವರಣದಲ್ಲಿ ಮೊಬೈಲ್ ಫೋನ್ ನಿಷೇಧಿಸಿ ಆದೇಶ ಹೊರಡಿಸಲಾಗಿದೆ.ರಾಮ ಮಂದಿರ ಟ್ರಸ್ಟ್ ನ ಪದಾಧಿಕಾರಿಗಳು, ಐಜಿ ಹಾಗೂ ಕಮಿಷ್ನರ್ ಗಳ ಸಭೆಯಲ್ಲಿ ಈ ಬಗ್ಗೆ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದ್ದು, ಇನ್ಮುಂದೆ ಅಯೋಧ್ಯೆ ರಾಮ ಮಂದಿರ ಆವರಣದಲ್ಲಿ ಮೊಬೈಲ್ ಫೋನ್ ಸಂಪೂರ್ಣವಾಗಿ ನಿಷೇಧಿಸಲಾಗಿದೆ.
ದೇವಸ್ಥಾನದಲ್ಲಿ ಸಾರ್ವಜನಿಕರು, ಮೊಬೈಲ್ ಕೊಂಡೊಯ್ಯುವುದನ್ನು ಈಗಾಗಲೇ ನಿಷೇಧಿಸಲಾಗಿತ್ತು. ಇದೀಗ ವಿಐಪಿಗಳು, ವಿವಿಐಪಿಗಳು ಕೂಡ ಮೊಬೈಲ್ ಫೋನ್ ಕೊಂಡೊಯ್ಯುವುದನ್ನು ನಿರ್ಬಂಧಿಸಲಾಗಿದೆ.
ಭದ್ರತೆಯನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಟ್ರಸ್ಟಿ ಅನಿಲ್ ಮಿಶ್ರಾ ತಿಳಿಸಿದ್ದಾರೆ. ಎಲ್ಲಾ ಸಂದರ್ಶಕರು ಈ ವ್ಯವಸ್ಥೆಯನ್ನು ಅನುಸರಿಸಬೇಕು. ಹಾಗೂ ಯಾವುದೇ ಅನಾನುಕೂಲತೆಯುಂಟಾಗದಂತೆ ಸಹಕರಿಸಬೇಕು ಎಂದು ವಿನಂತಿಸಿದ್ದಾರೆ.