ನವದೆಹಲಿ: ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ರಾಮಮಂದಿರದಲ್ಲಿ 22 ಜನವರಿ 2024ರಂದು ಪ್ರಾಣ ಪ್ರತಿಷ್ಟಾಪನೆ ನಡೆಯಲಿದೆ. ಇದರಲ್ಲಿ ಪಾಲ್ಗೊಳ್ಳುವ ಎಲ್ಲರಿಗೂ ಆಧಾರ್ ದಾಖಲಾತಿ ಕಡ್ಡಾಯಗೊಳಿಸಲಾಗಿದೆ. ಇನ್ನು ಅದೇ ದಿನ ಪ್ರಧಾನ ಮಂತ್ರಿ ನರೇಂದ್ರ ಮೋದಿ ರಾಮಲಲ್ಲಾ ಪ್ರತಿಮೆಗೆ ಮಹಾಮಸ್ತಕಾಭಿಷೇಕ ನೆರವೇರಿಸಲಿದ್ದಾರೆ. ‘ಪ್ರಾಣ ಪ್ರತಿಷ್ಠಾ’ದ ಅಂತಿಮ ಹಂತವು ಮಧ್ಯಾಹ್ನ 12 ಗಂಟೆಗೆ ಪ್ರಾರಂಭವಾಗುತ್ತದೆ, ರಾಮ್ ಲಲ್ಲಾ ಪ್ರತಿಮೆಯನ್ನು ಮಧ್ಯಾಹ್ನ 12:45 ರಿಂದ 1 ಗಂಟೆಯವರೆಗೆ ಪ್ರತಿಷ್ಠಾಪಿಸಲಾಗುತ್ತದೆ. ಚಂಪತ್ರೈ ಸಮಾರಂಭದಲ್ಲಿ ಪಾಲ್ಗೊಳ್ಳುವ ಅತಿಥಿಗಳು ಗುರುತಿನ ಉದ್ದೇಶಕ್ಕಾಗಿ ತಮ್ಮ ಆಧಾರ್ ಕಾರ್ಡ್ ತರಬೇಕಾಗುತ್ತದೆ. ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರೈ ಅವರು ಕರಸೇವಕಪುರಂನ ಭಾರತಕುಟಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಈ ಅಗತ್ಯವನ್ನು ಪ್ರಕಟಿಸಿದ್ದಾರೆ.