ಹುಬ್ಬಳ್ಳಿ: ನೂತನ ಸಂಸತ್ ಭವನ ವಿಚಾರವಾಗಿ ರಾಷ್ಟ್ರಪತಿ ಹೆಸರಲ್ಲಿ ಕಾಂಗ್ರೆಸ್ ಚಿಲ್ಲರೆ ರಾಜಕಾರಣ ಮಾಡುತ್ತಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ ಜೋಶಿ ಆರೋಪಿಸಿದ್ದಾರೆ.
ನೂತನ ಸಂಸತ್ ಶಿಲಾನ್ಯಾಸ ಕಾರ್ಯಕ್ರಮಕ್ಕೆ ರಾಷ್ಟ್ರಪತಿ ದಲಿತರೆಂಬ ಕಾರಣಕ್ಕೆ ಆಹ್ವಾನಿಸಲಿಲ್ಲ ಎಂಬ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ ನವರು ರಾಷ್ಟ್ರಪತಿ ಚುನಾವಣೆಯಲ್ಲಿ ದ್ರೌಪದಿ ಮುರ್ಮು ಅವರಿಗೆ ಯಾಕೆ ಬೆಂಬಲ ನೀಡಿರಲಿಲ್ಲ. ಸೋಲುತ್ತೇವೆಂದು ಗೊತ್ತಿದ್ದರೂ ಬೇರೆ ಅಭ್ಯರ್ಥಿ ಕಣಕ್ಕಿಳಿಸಿದ್ದರು. ಅದು ಚಿಲ್ಲರೆ ರಾಜಕಾರಣ ಎಂದರು.
ಇನ್ನು ಆಧುನಿಕ ವ್ಯವಸ್ಥೆಗೆ ತಕ್ಕಂತೆ ನೂತನ ಸಂಸತ್ ಭವನ ನಿರ್ಮಿಸಲಾಗಿದೆ. ಆದರೆ ಕಾಂಗ್ರೆಸ್ ಮುಖಂಡ ಜೈರಾಮ್ ರಮೇಶರು ನೂತನ ಸಂಸತ್ ಭವನವನ್ನು ಮೋದಿ ಮಲ್ಟಿಫ್ಲೆಕ್ಸ್ ಎಂಬ ಕ್ಷುಲಕ ಹೇಳಿಕೆ ನೀಡಿರುವುದು ಅವರ ಮನಸ್ಥಿತಿಯನ್ನು ತೋರಿಸುತ್ತದೆ ಎಂದಿದ್ದಾರೆ.