ಬೆಂಗಳೂರು: 2023-24ನೇ ಸಾಲಿನಲ್ಲಿ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ವಿದೇಶಿ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ನವೆಂಬರ್ 30 ಕೊನೆ ದಿನ.
ವಿದ್ಯಾರ್ಥಿಗಳ ಪೋಷಕರ ವಾರ್ಷಿಕ ಆದಾಯವು ರೂ 6 ಲಕ್ಷಗಳ ಒಳಗಿದ್ದಲ್ಲಿ ಎರಡು ವರ್ಷಗಳ ಕೋರ್ಸುಗೆ ಗರಿಷ್ಠ ರೂ.20 ಲಕ್ಷಗಳ ಮಿತಿಯಲ್ಲಿ ವಿದ್ಯಾರ್ಥಿವೇತನ ಭರಿಸಲಾಗುವುದು. (ಒಂದು ವರ್ಷಕ್ಕೆ ರೂ 10 ಲಕ್ಷಗಳಂತೆ) ಪೋಷಕರ ವಾರ್ಷಿಕ ಆದಾಯವು ರೂ.6 ಲಕ್ಷದಿಂದ ರೂ.15 ಲಕ್ಷಗಳ ಒಳಗಿದ್ದಲ್ಲಿ ಎರಡು ವರ್ಷಗಳ ಕೋರ್ಸ್‍ಗೆ ರೂ.10 ಲಕ್ಷಗಳ ಗರಿಷ್ಠ ಮಿತಿಯಲ್ಲಿ ವಿದ್ಯಾರ್ಥಿ ವೇತನ ಪಾವತಿಸುವುದು (ಒಂದು ವರ್ಷಕ್ಕೆ ರೂ.5 ಲಕ್ಷಗಳಂತೆ) , ಅಲ್ಪಸಂಖ್ಯಾತರ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ದ, ಸಿಖ್ ಮತ್ತು ಪಾರ್ಸಿ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪ್ರೋತ್ಸಾಹಧನ ಯೋಜನೆಯ ಪ್ರಯೋಜನೆ ಪಡೆಯಬಹುದು.
ಸೇವಾಸಿಂಧು ವೆಬ್‍ಸೈಟ್ https://sevasindhu.karnataka.gov.in/sevasindhu/departmentservices ಈ ಲಿಂಕ್ ಮೂಲಕ ಅರ್ಜಿ ಸಲ್ಲಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.