ಚಿತ್ರದುರ್ಗ: ವಿಕಲಚೇತನರ ಸಬಲೀಕರಣಕ್ಕಾಗಿ ಜಿಲ್ಲೆಯ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ವ್ಯಕ್ತಿ, ಸಂಸ್ಥೆಗಳಿಂದ ರಾಷ್ಟ್ರ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಜುಲೈ 31 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.
ಅರ್ಜಿಗಳನ್ನು www.awards.gov.in ಮತ್ತು www.depwd.gov.inನ ಮೂಲಕ ಅರ್ಜಿ ಸಲ್ಲಿಸಬಹುದು. ಆನ್‍ಲೈನ್ ಮೂಲಕ ಸಲ್ಲಿಸಲಾದ ಅರ್ಜಿಯೊಂದಿಗೆ 2 ಪಾಸ್‍ಪೋರ್ಟ್ ಅಳತೆಯ ಭಾವಚಿತ್ರ, ಅರ್ಜಿದಾರರ, ವ್ಯಕ್ತಿಗಳ ಅಥವಾ ಸಂಸ್ಥೆಗಳ ಸ್ವವಿವರ ಹಾಗೂ ಸಾರಾಂಶ ಪೂರಕ ದಾಖಲೆಗಳು ಮತ್ತು ಡ್ರಾಫ್ಟ್ ಸೈಟೇಷನ್(1 ಪುಟಕ್ಕೆ ಮೀರದಂತೆ) ಅಗತ್ಯ ದಾಖಲೆಗಳೊಂದಿಗೆ ಚಿತ್ರದುರ್ಗ ನಗರದ ಸ್ಟೇಡಿಯಂ ರಸ್ತೆಯ ಜಿಲ್ಲಾ ಬಾಲಭವನ ಆವರಣದಲ್ಲಿರುವ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿಗೆ ಸಲ್ಲಿಸಲು ಸೂಚಿಸಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿ ದೂರವಾಣಿ ಸಂಖ್ಯೆ 08194-235284 ಹಾಗೂ 08392-267886 ಗೆ ಅಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ತಿಳಿಸಿದ್ದಾರೆ.