ಲಕ್ನೋ: ಕಾಂಗ್ರೆಸ್‌ನ ಮಾಜಿ ನಾಯಕ ಆಚಾರ್ಯ ಪ್ರಮೋದ್ ಕೃಷ್ಣಂ ಅವರು ರಾಹುಲ್ ಗಾಂಧಿ ವಿರುದ್ಧ ಕಾಂಗ್ರೆಸ್‌ನ ಮಾಜಿ ನಾಯಕ ಆಚಾರ್ಯ ಪ್ರಮೋದ್ ಕೃಷ್ಣಂ ಅವರು ಆಕೋಶ್ರ ಹೊರಹಾಕಿದ್ದಾರೆ. ಕಳೆದ 13-14 ವರ್ಷಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ಕಸದ ಬುಟ್ಟಿಗೆ ಎಸೆದಿರುವ ರಾಹುಲ್ ಗಾಂಧಿ ಅವರಿಗೆ ಸಾಕಷ್ಟು ಅನುಭವವಿದೆ ಎಂದು ಕಿಡಿಕಾರಿದ್ದಾರೆ.
ತಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಅಗ್ನಿವೀರ್ ಯೋಜನೆಯನ್ನು ಕಸದ ಬುಟ್ಟಿಗೆ ಎಸೆಯುವುದಾಗಿ ರಾಹುಲ್ ಗಾಂಧಿ ನಿರಂತರವಾಗಿ ಹೇಳುತ್ತಿದ್ದಾರೆ. ಈ ಹೇಳಿಕೆಗೆ ಪ್ರತಿಕ್ರಿಯಿಸಿದ ಆಚಾರ್ಯ ಪ್ರಮೋದ್ ಕೃಷ್ಣಂ ಅವರು, ರಾಹುಲ್ ಗಾಂಧಿ ಅವರಿಗೆ ಕಸದ ತೊಟ್ಟಿಗಳಲ್ಲಿ ಸಾಕಷ್ಟು ಅನುಭವವಿದೆ. ಮನಮೋಹನ್ ಅವರ ಸುಗ್ರೀವಾಜ್ಞೆಯನ್ನು ಹರಿದು ಕಸದ ಬುಟ್ಟಿಗೆ ಎಸೆದಿದ್ದರು ಎಂದರು.ಸೋನಿಯಾ, ರಾಜೀವ್, ಇಂದಿರಾ ಅವರ ಜೊತೆಗಿದ್ದ ಕಾಂಗ್ರೆಸ್‌ನ ದೊಡ್ಡ ನಾಯಕರನ್ನೂ ಕಸದ ಬುಟ್ಟಿಗೆ ಎಸೆಯಲಾಯಿತು. ರಾಹುಲ್ ಗಾಂಧಿ ಅವರೇ ಧೈರ್ಯ ಇದ್ದರೆ ಈ ದೇಶವನ್ನು ಕಸದ ಬುಟ್ಟಿಗೆ ಎಸೆಯಿರಿ. ಅವರೇ ಕಸದ ಒಡೆಯ. ಅವರು ಯಾರನ್ನೂ ಕಸದ ಬುಟ್ಟಿಗೆ ಎಸೆಯಬಹುದು. ಸನಾತನವನ್ನು ಕಸದ ಬುಟ್ಟಿಗೆ ಎಸೆಯಲು ಬಯಸುತ್ತಾರೆ ಎಂದು ರಾಹುಲ್ ವಿರುದ್ಧ ಆಚಾರ್ಯರು ತೀವ್ರ ವಾಗ್ದಾಳಿ ನಡೆಸಿದರು.ಈ ಹಿಂದೆ ವಾಗ್ದಾಳಿ ನಡೆಸಿದ್ದ ಆಚಾರ್ಯರು, ಕಾಂಗ್ರೆಸ್ ತೊಲಗಬೇಕು ಎಂದು ಮಹಾತ್ಮ ಗಾಂಧೀಜಿ ಕನಸು ಕಂಡಿದ್ದರು, ಬಿಜೆಪಿಯಿಂದ ಆ ಕೆಲಸ ಮಾಡಲು ಸಾಧ್ಯವಿಲ್ಲ, ಆದರೆ ರಾಹುಲ್ ಗಾಂಧಿ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.