ರೇಣುಕಸ್ವಾಮಿ ಕೊಲೆ ಕೇಸ್‌: ನಟ ದರ್ಶನ್‌ ಬಳ್ಳಾರಿ ಜೈಲಿಗೆ ಶಿಫ್ಟ್‌

ಬೆಂಗಳೂರು: ರೇಣುಕಸ್ವಾಮಿ ಕೊಲೆ ಪ್ರಕರಣದ ಆರೋಪಿ ದರ್ಶ ನ್ ಹಾಗೂ ಸಹಚರರನ್ನು ರಾಜ್ಯದ ಬೇರೆ ಬೇರೆ ಜೈಲಿಗೆ ಸ್ಥಳಾಂತರಿಸುವ ಪ್ರಕ್ರಿಯೆ ಆರಂಭವಾಗಿದೆ. ಗುರುವಾರ ಬೆಳಗಿನ ಜಾವ ವೇಳೆಯೇ ದರ್ಶನ್ ಅವರನ್ನು ಬಳ್ಳಾರಿ ಜೈಲಿನತ್ತ ಕರೆದೊಯ್ಯಲಾಯಿತು.

ಪೊಲೀಸ್ ವಾಹನದಲ್ಲಿ ಬಿಗಿ ಭದ್ರತೆಯೊಂದಿಗೆ ದರ್ಶನ್ ಅವರನ್ನು ಕರೆದೊಯ್ಯಲಾಯಿತು. ಮಾರ್ಗದ ಪ್ರಮುಖ ಜಂಕ್ಷನ್‌ಗಳಲ್ಲಿ ಪೊಲೀಸ್ ಭದ್ರತೆ ಯನ್ನು ಕೂಡ ನಿಯೋಹಜಿಸಲಾಗಿತ್ತು.ಆರೋಪಿ ಖ್ಯಾತ ನಟನಾಗಿದ್ದ ಹಿನ್ನಲೆ ಮಾರ್ಗದ ಮಧ್ಯೆ ಅಭಿಮಾನಿಗಳು ದೌಡಯಿಸುವ ಸಾಧ್ಯತೆ ಇದೆ. ಹೀಗಾಗಿ ಹಿರಿಯ ಅಧಿಕಾರಿಗಳ
ಸೂಚನೆ ಮೇರೆಗೆ ಕರೆದೊಯ್ಯಲಾಯಿತು ಎಂದು ಪೊಲೀಸ್‌ ಮೂಲಗಳಿಂದ ತಿಳಿದು ಬಂದಿದೆ.

ಪರಪ್ಪನ ಅಗ್ರಹಾರದಿಂದ ಹೊರಟ ವಾಹನ ಮೇಕ್ರಿ ವೃತ್ತ, ಹೆಬ್ಬಾಳ ರಸ್ತೆ, ಯಲಹಂಕಮಾರ್ಗ ವಾಗಿ ಬಳ್ಳಾರಿಯತ್ತ ದರ್ಶನ್ ಅವರನ್ನು ಬಿಗಿ
ಭದ್ರತೆಯಲ್ಲಿ ಕರೆದೊಯ್ಯಲಾಯಿತು.ಉಳಿದ ವಿಚಾರಣಾಧೀನ ಕೈ ದಿಗಳನ್ನು ಮೈಸೂರು, ಶಿವಮೊಗ್ಗ, ಧಾರವಾಡ, ವಿಜಯಪುರ, ಕಲಬುರಗಿ, ಬೆಳಗಾವಿ ಕಾರಾಗೃಹಕ್ಕೆ
ಕರೆದೊಯ್ಯಲಾಗಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.

Advertisement

 

ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ.

 

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement