ರೇಣುಕಾ ಸ್ವಾಮಿ ಕೊಲೆ ಕೇಸ್: ‘ತನಿಖೆಯಾಗುವವರೆಗೂ ಏನೂ ಹೇಳಲು ಸಾಧ್ಯವಿಲ್ಲ’- ಜಿ.ಪರಮೇಶ್ವರ್

ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಅವರನ್ನು ಬಂಧಿಸಲಾಗಿದೆ. ಆರೋಪಿಗಳನ್ನು ವಿಚಾರಣೆ ಮಾಡುವಾಗ ದರ್ಶನ್ ಹೆಸರು ಬಂದಿದೆ ಎಂಬ ಮಾಹಿತಿ ಇದೆ. ಅದರ ಮೇಲೆ ತನಿಖೆ ಆಗುವವರೆಗೂ ಏನೂ ಹೇಳಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಜಿ. ಪರಮೇಶ್ವರ ತಿಳಿಸಿದರು.

ಈ ಕೇಸ್‌ನಲ್ಲಿ ದರ್ಶನ್ ನೇರವಾಗಿ ಭಾಗಿಯಾಗಿದ್ದಾರೆಯೇ? ಇಲ್ಲವೇ? ಯಾವ ಕಾರಣಕ್ಕೆ ಕೊಲೆ ನಡೆದಿದೆ. ದರ್ಶನ್ ಹೆಸರು ಯಾಕೆ ಬಂದಿದೆ ಎನ್ನುವುದು ತನಿಖೆ ನಂತರ ಗೊತ್ತಾಗಲಿದೆ. ಸದ್ಯ ಬೇರೆ ಏನು ಹೇಳೋಕೆ ಆಗಲ್ಲ. ತನಿಖೆ ಆದಮೇಲೆ ಎಲ್ಲವೂ ಗೊತ್ತಾಗಲಿದೆ. ಅದಕ್ಕಿಂತ ಮೊದಲು ಏನು ಹೇಳಲು ಆಗುವುದಿಲ್ಲ ಎಂದರು.

ಸಾಮಾಜಿಕ ಜಾಲತಾಣದಲ್ಲಿ ಕಾಮೆಂಟ್ ಬಗ್ಗೆ ಗೊತ್ತಿಲ್ಲ. ಮೈಸೂರಿನಲ್ಲಿ ಬಂಧನ ಆಗಿದೆ. ಪೊಲೀಸರು ನಟ ದರ್ಶನ್ ಅವರನ್ನು ಮೈಸೂರಿನಿಂದ ಬೆಂಗಳೂರಿಗೆ ಕರೆದುಕೊಂಡು ಬಂದಿದ್ದಾರೆ. ಈ ಸಂಸರ್ಭದಲ್ಲಿ ಬೇರೇನು ಹೇಳಲು ಸಾಧ್ಯವಿಲ್ಲ ಎಂದು ಹೇಳಿದರು.

Advertisement

 

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement