ರೇಣುಕಾ ಸ್ವಾಮಿ ಪತ್ನಿಗೆ ಗಂಡು ಮಗು ಜನನ..!!

ಚಿತ್ರದುರ್ಗ: ನಟ ದರ್ಶನ್ ಅಂಡ್ ಗ್ಯಾಂಗ್ ನಿಂದ ಬರ್ಬರವಾಗಿ ಹತ್ಯೆಯಾಗಿದ್ದ ಚಿತ್ರದುರ್ಗದ ರೇಣುಕಾಸ್ವಾಮಿಗೆ ಗಂಡು ಮಗು ಜನನವಾಗಿದೆ. ನಗರದ ಕೀರ್ತಿ ಆಸ್ಪತ್ರೆಯಲ್ಲಿ ರೇಣುಕಾಸ್ವಾಮಿ ಪತ್ನಿ ಸಹನ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.

ರೇಣುಕಾಸ್ವಾಮಿ ಕೊಲೆಯಾದ ಸಂಧರ್ಭದಲ್ಲಿ ಪತ್ನಿ ಸಹನ ಗರ್ಭಿಣಿಯಾಗಿದ್ದರು. ತಡರಾತ್ರಿ ಆಸ್ಪತ್ರೆಗೆ ದಾಖಲಾಗಿದ್ದ ಪತ್ನಿಸಹನಾ ಅವರಿಗೆ ಅ. 16 ರಂದು ಬುಧವಾರ ಬೆಳಗಿನ ಜಾವ 5 ಗಂಟೆಗೆ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.

ತಾಯಿ -ಮಗು ಆರೋಗ್ಯವಾಗಿದ್ದಾರೆ ಅಲ್ಲದೆ ಕೀರ್ತಿ ಆಸ್ಪತ್ರೆಯಿಂದ ಡಾ.ಮಲ್ಲಿಕಾರ್ಜುನ್ ಸಂಪೂರ್ಣ ಉಚಿತ ಚಿಕಿತ್ಸೆ ನೀಡಿದ್ದಾರೆ ಎಂದು ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ.

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement