ಲೈಂಗಿಕ ದೌರ್ಜನ್ಯ ಆರೋಪ ಎದುರಿಸುತ್ತಿರುವ ಹೊಳೆನರಸೀಪುರ ಶಾಸಕ ಹೆಚ್.ಡಿ ರೇವಣ್ಣರ ಜಾಮೀನು ಅರ್ಜಿ ವಿಚಾರಣೆ ನಡೆಸಿದ, ಬೆಂಗಳೂರಿನ 42ನೇ ACMM ನ್ಯಾಯಾಲಯ ಇದೀಗ ಆದೇಶವನ್ನು ಮೇ 20ಕ್ಕೆ ಕಾಯ್ದಿರಿಸಿದೆ.
ಸೋಮವಾರದವರೆಗೆ ಮಧ್ಯಂತರ ಜಾಮೀನು ಮುಂದುವರೆಯವುದು ಎಂದು ನ್ಯಾಯಾಲಯ ತಿಳಿಸಿದೆ. ಮೇ 20ಕ್ಕೆ ಕೋರ್ಟ್ ತೀರ್ಪು ಪ್ರಕಟಿಸಲಿದ್ದು ಇದರಿಂದ ಸದ್ಯ ರೇವಣ್ಣರಿಗೆ 3 ದಿನ ತಾತ್ಕಾಲಿಕ ರಿಲೀಫ್ ಸಿಕ್ಕಂತಾಗಿದೆ.