ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯಿಂದ ರೇಷನ್ ಕಾರ್ಡ ಹೊಂದಿರುವ ಗ್ರಾಹಕರಿಗೆ ತಿದ್ದುಪಡಿ(ration card tiddupadi) ಮಾಡಿಕೊಳ್ಳಲು ಅನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ.
ಈ ಬಾರಿ ಹೆಚ್ಚು ದಿನಗಳ ವರೆಗೆ ಅರ್ಜಿ ಸಲ್ಲಿಸಲು ಅವಕಾಶ(ration card tiddupadi arji) ಮಾಡಿಕೊಡಲಾಗಿದ್ದು ಯಾರೆಲ್ಲ ತಿದ್ದುಪಡಿ ಮಾಡಿಸಿಕೊಳ್ಳಲು ಕಾಯುತ್ತಿರುವವರು ಈ ಅವಕಾಶವನ್ನು ಬಳಕೆ ಮಾಡಿಕೊಳಬಹುದು.
ಯಾವ ದಿನ ತಿದ್ದುಪಡಿಗೆ ಅವಕಾಶ ನೀಡಲಾಗಿದೆ? ತಿದ್ದುಪಡಿ ಅರ್ಜಿಯ ಸ್ಥಿತಿಯನ್ನು ಮೊಬೈಲ್ ನಲ್ಲಿ ಹೇಗೆ ಚೆಕ್ ಮಾಡುವುದು? ಯಾವೆಲ್ಲ ತಿದ್ದುಪಡಿಗೆ ಅರ್ಜಿ ಸಲ್ಲಿಸಬಹುದು? ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳೇನು? ಎನ್ನುವ ಸಂಪೂರ್ಣ ಮಾಹಿತಿ ಇಲ್ಲಿದೆ.
ಯಾವೆಲ್ಲ ತಿದ್ದುಪಡಿಗೆ ಅರ್ಜಿ ಸಲ್ಲಿಸಲು ಅವಕಾಶವಿದೆ?
1) ಹೊಸ ಸದಸ್ಯರ ಹೆಸರು ಸೇರ್ಪಡೆಗೆ ಅವಕಾಶ.
2) ಆಧಾರ್ ಈ-ಕೆವೈಸಿ
3) ಹೆಸರು ತೆಗೆಯುವುದು
4) ವಿಳಾಸ ಬದಲಾವಣೆ
5) ನ್ಯಾಯಬೆಲೆ ಅಂಗಡಿ ಬದಲಾವಣೆ
6) ಹೆಸರು ತಿದ್ದುಪಡಿ ಮಾಡಬಹುದು.
ಅರ್ಜಿ ಸಲ್ಲಿಸಬೇಕಾಗುವ ಅಗತ್ಯ ದಾಖಲಾತಿಗಳು:
ಅರ್ಜಿದಾರರ ಅಧಾರ್ ಕಾರ್ಡ ಪ್ರತಿ.ಹೊಸ ಹೆಸರು ಸೇರ್ಪಡೆಗೆ ಜಾತಿ ಮತ್ತು ಅದಾಯ ಪ್ರಮಾಣ ಪತ್ರ.ಮೊಬೈಲ್ ಸಂಖ್ಯೆ.ಹಾಲಿ ಪಡಿತರ ಚೀಟಿ/ರೇಷನ್ ಕಾರ್ಡ.
ಎಲ್ಲಿ ಅರ್ಜಿ ಸಲ್ಲಿಸಬೇಕು?
ರೇಷನ್ ಕಾರ್ಡ ತಿದ್ದುಪಡಿ ಮಾಡಿಕೊಳ್ಳಲು ಆಸಕ್ತಿಯಿರುವ ಗ್ರಾಹಕರು ನಿಮ್ಮ ಹಳ್ಳಿಗೆ ಹತ್ತಿರವಿರುವ ಗ್ರಾಮ ಒನ್/ಕರ್ನಾಟಕ ಒನ್ ಕೇಂದ್ರವನ್ನು ಅಗತ್ಯ ದಾಖಲೆಗಳ ಸಮೇತ ಭೇಟಿ ಮಾಡಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ ತಿದ್ದುಪಡಿ ಮಾಡಿಕೊಳ್ಳಬೇಕು.
ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಅವಧಿ:
ರೇಷನ್ ಕಾರ್ಡ್ ತಿದ್ದುಪಡಿಗೆ ಅರ್ಜಿ ಸಲ್ಲಿಸಲು ದಿನಾಂಕ: 02 ಆಗಸ್ಟ್ 2024 ರಿಂದ 10 ಆಗಸ್ಟ್ 2024ರ ವರೆಗೆ ಪ್ರತಿ ದಿನ ಬೆಳ್ಳಗೆ 10-00 ಗಂಟೆಯಿಂದ ಸಂಜೆ 5-00 ಗಂಟೆ ವರೆಗೆ ಅವಕಾಶ ಮಾಡಿಕೊಡಲಾಗಿದೆ. ಸರ್ವರ್ ಸಮಸ್ಯೆ ಬಂದಲ್ಲಿ ಸಾರ್ವಜನಿಕರಿಗೆ ಈ ಬಾರಿಯು ನಿರಾಸೆ ಮೂಡಿಸಿದಂತಾಗುತ್ತದೆ.