ಬೆಂಗಳೂರು: ರಾಜ್ಯದ ರೈತರಿಗೆ ರಾಜ್ಯ ಸರ್ಕಾರ ಕೊನೆಗೂ ಸಿಹಿ ಸುದ್ದಿ ನೀಡಿದೆ.
ಮುಖ್ಯಮಂತ್ರಿಗಳ ಸೂಚನೆಯಂತೆ ರೈತರಿಗೆ 5 ಗಂಟೆ ನಿರಂತರ ವಿದ್ಯುತ್ ಪೂರೈಕೆಗೆ ಸರ್ಕಾರ ಬದ್ಧವಾಗಿದೆ ಎಂದು ಸಚಿವ ಕೆಜೆ ಜಾರ್ಜ್ ಹೇಳಿದ್ದಾರೆ. ‘
ರೈತರಿಗೆ ತೊಂದರೆಯಾಗದಂತೆ ಸತತ 5 ಗಂಟೆ ವಿದ್ಯುತ್ ಒದಗಿಸಲು ಅಗತ್ಯ ಕ್ರಮ ವಹಿಸುವಂತೆ ಎಲ್ಲಾ ಎಸ್ಕಾಂ ಎಂಡಿಗಳಿಗೆ ಸೂಚಿಸಿದ್ದೇನೆ. ಬೆಳಗ್ಗೆ 2, ರಾತ್ರಿ 1 ಪಾಳಿಯಲ್ಲಿ ಅಂದರೆ ಒಟ್ಟು 3 ಪಾಳಿಗಳಲ್ಲಿ ವಿದ್ಯುತ್ ನೀಡಲಾಗುವುದು’ ಎಂದು ಮಾಹಿತಿ ನೀಡಿದರು.