ಚಿತ್ರದುರ್ಗ: ಹಿರಿಯೂರು ತಾಲ್ಲೂಕಿನ ಬಬ್ಬೂರುಫಾರಂನ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಇದೇ ಮಾರ್ಚ್ 11ರಂದು ಬೆಳಿಗ್ಗೆ 10.30ಕ್ಕೆ ಜಿಲ್ಲೆಯ ರೈತರಿಗೆ ಸಮಗ್ರ ಕೃಷಿ ಪದ್ದತಿ ಮತ್ತು ವೈಜ್ಞಾನಿಕ ಕಳೆ ನಿರ್ವಹಣೆ ಕುರಿತು ರೈತರಿಗೆ ಒಂದು ದಿನದ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ತರಬೇತಿ ಕಾರ್ಯಕ್ರಮದಲ್ಲಿ ಬೆಂಗಳೂರು ಜಿಕೆವಿಕೆ ಕೃಷಿ ವಿದ್ಯಾನಿಲಯದ ಸಮಗ್ರ ಕೃಷಿ ಪದ್ಧತಿಗಳ ವಿಭಾಗದ ಪ್ರಾಧ್ಯಾಪಕ ಡಾ.ಎಂ.ಟಿ.ಸಂಜಯ್ ಅವರು, ಸಮಗ್ರ ಕೃಷಿ ಪದ್ದತಿ ಮತ್ತು ವೈಜ್ಞಾನಿಕ ಕಳೆ ನಿರ್ವಹಣೆ ಕುರಿತು ವಿಷಯ ಮಂಡನೆ ಮಾಡುವರು.
ಆಸಕ್ತ 50 ಜನ ರೈತಭಾಂದವರು ತರಬೇತಿಯಲ್ಲಿ ಭಾಗವಹಿಸಲು ಆರ್. ರಜನೀಕಾಂತ, ಸಹಾಯಕ ಕೃಷಿ ನಿರ್ದೇಶಕರು, ಜಿಲ್ಲಾ ಕೃಷಿ ತರಬೇತಿ ಕೇಂದ್ರ, ಬಬ್ಬೂರು ಫಾರಂ (8277931058), ಎಂ.ಉಷಾರಾಣಿ, ಸಹಾಯಕ ಕೃಷಿ ನಿರ್ದೇಶಕರು (ರೈ.ಮ) 9980730696, ಟಿ.ಪಿ.ರಂಜಿತಾ, ಕೃಷಿ ಅಧಿಕಾರಿ (8277930959), ಸಿಕಂದರ್ ಬಾಷಾ, ಕೃಷಿ ಅಧಿಕಾರಿ (8277931058) ಮತ್ತು ಪವಿತ್ರಾ ಎಂ. ಜೆ. (9535412286) ಅವರ ದೂರವಾಣಿ ಸಂಖ್ಯೆಗೆ ಕರೆ ಮಾಡಿ ನೋಂದಾಯಿಸಿ ತರಬೇತಿಯ ಸದುಪಯೋಗ ಪಡೆದುಕೊಳ್ಳಲು ಕೋರಿದೆ.
ಮೊದಲು ನೋಂದಾವಣಿ ಮಾಡಿಕೊಂಡ 50 ಜನ ರೈತಭಾಂದವರಿಗೆ ಆದ್ಯತೆ ಮೇರೆಗೆ ತರಬೇತಿಗೆ ಪರಿಗಣಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.