ರೈತರಿಗೊಂದು ಸುವರ್ಣಾವಕಾಶ,  ರೈತರಿಂದಲೇ ಬೆಳೆ ಸಮೀಕ್ಷೆಗೆ ಈ ಆ್ಯಪ್ ಬಳಸಿ.!

 ದಾವಣಗೆರೆ : ರೈತರು ಬೆಳೆದ ಬೆಳೆಗಳಿಗೆ ಸರ್ಕಾರದ ಯೋಜನೆಗಳನ್ನು ಪಡೆಯಲು ಬೆಳೆ ಸಮೀಕ್ಷೆ ಅಡಿಯಲ್ಲಿ ನಿಖರವಾಗಿ ಬೆಳೆಯನ್ನು ನಮೂದಿಸುವುದು ಅತ್ಯಗತ್ಯವಾಗಿದೆ.  ಸ್ವತ: ರೈತರು ತಮ್ಮ ಜಮೀನಿನ ಸರ್ವೆ ನಂಬರ್, ಹಿಸ್ಸಾ ನಂಬರ್ ವಾರು ಬೆಳೆದ ವಿವಿಧ ಬೆಳೆಗಳ ವಿವರ, ಕ್ಷೇತ್ರ, ಖುಷ್ಕಿ, ನೀರಾವರಿ ಮಾಹಿತಿಯನ್ನು ಛಾಯಾಚಿತ್ರ ಸಹಿತ ಬೆಳೆಯ ವಿವರಗಳನ್ನು ಬೆಳೆ ಸಮೀಕ್ಷೆ ಆ್ಯಪ್‍ನಲ್ಲಿ ಅಪ್‍ಲೋಡ್ ಮಾಡಬಹುದು. ಮುಂಗಾರು ರೈತರ ಬೆಳೆ ಸಮೀಕ್ಷೆ 2024-25 (Kharif Season Farmer App 2024-25) ಆ್ಯಪ್ ಗೂಗಲ್ ಪ್ಲೇಸ್ಟೋರ್ ಮೂಲಕ ಡೌನ್ ಲೋಡ್ ಮಾಡಿಕೊಳ್ಳಬಹುದು.

ಬೆಳೆ ಸಮೀಕ್ಷೆಯ ದತ್ತಾಂಶಗಳನ್ನು ವಿವಿಧ ಉದ್ದೇಶಗಳಿಗಾಗಿ ಬಳಸಬಹುದು: ಕೃಷಿ, ರೇμÉ್ಮ, ತೋಟಗಾರಿಕಾ ಬೆಳೆಗಳ ವಿಸ್ತೀರ್ಣ ಎಣಿಕೆ ಕಾರ್ಯಗಳಲ್ಲಿ, ಬೆಳೆ ವಿಮೆ ಯೋಜನೆಯ ಸರ್ವೆ ನಂಬರ್‍ವಾರು ಬೆಳೆ ಪರಿಶೀಲನೆ ಹಾಗೂ ಬೆಳೆ ಕಟಾವು ಪ್ರಯೋಗಗಳನ್ನು ಕೈಗೊಳ್ಳಲು ಸರ್ವೆ ನಂಬರ್ ಆಯ್ಕೆ ಮಾಡಲು, ಕನಿಷ್ಠ ಬೆಂಬಲ ಬೆಲೆ ನಿಗದಿ ಮಾಡಲು ಹಾಗೂ ಅರ್ಹ ಫಲಾನುಭವಿಗಳನ್ನು ಗುರುತಿಸಲು, ಆರ್.ಟಿ.ಸಿ.ಯಲ್ಲಿ ಬೆಳೆ ವಿವರಗಳ ದಾಖಲಾತಿಗಾಗಿ, ಎನ್.ಡಿ.ಆರ್.ಎಫ್/ಎಸ್.ಡಿ.ಆರ್.ಎಫ್ ಅಡಿಯಲ್ಲಿ ಪ್ರಕೃತಿ ವಿಕೋಪದ ಸಂದರ್ಭದಲ್ಲಿ ಹಾನಿಗೊಳಗಾದ ಬೆಳೆಯ ವಿಸ್ತೀರ್ಣದ ವಿವರ ಹಾಗೂ ಅರ್ಹ ಫಲಾನುಭವಿಗಳ ಪಟ್ಟಿ ತಯಾರಿಸುವ ಸಂದರ್ಭದಲ್ಲಿ, ಮೇಲೆ ತಿಳಿಸಿದ ಕಾರ್ಯಗಳಿಗೆ ಬೆಳೆ ಸಮೀಕ್ಷೆಯ ಮಾಹಿತಿಯು ಅತ್ಯಗತ್ಯವಾಗಿದ್ದು, ರೈತರು ತಪ್ಪದೇ ತಮ್ಮ ಜಮೀನಿನಲ್ಲಿರುವ ಕೃಷಿ, ತೋಟಗಾರಿಕೆ, ಅರಣ್ಯ, ರೇμÉ್ಮ ಇತರೆ ಬೆಳೆಗಳ ವಿವರಗಳನ್ನು ಬೆಳೆ ಸಮೀಕ್ಷೆ  ಆ್ಯಪ್ ನಮೂದಿಸಬೇಕು.

ಆಯಾ ಗ್ರಾಮದಲ್ಲಿರುವ ವಿದ್ಯಾವಂತ ಯುವಕರನ್ನು ಖಾಸಗಿ ನಿವಾಸಿಗಳೆಂದು ಗುರುತಿಸಲಾಗಿದ್ದು ಅವರ ಸಹಾಯದಿಂದಲೂ ಬೆಳೆ ಸಮೀಕ್ಷೆ ಆ್ಯಪ್ ತಾವು ಬೆಳೆದ ಬೆಳೆಯನ್ನು ದಾಖಲಿಸಬಹುದು. ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ವಿವರಗಳನ್ನು ರೈತರೇ ಖುದ್ದು, ಖಾಸಗಿ ನಿವಾಸಿಗಳ ಸಹಾಯ ಪಡೆದು ಬೆಳೆ ಸಮೀಕ್ಷೆ ಮಾಡಲು ಅವಕಾಶವಿದೆ.

Advertisement

ಹೆಚ್ಚಿನ ಮಾಹಿತಿಗಾಗಿ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿಗಳು, ಕಂದಾಯ ನಿರೀಕ್ಷಕರು, ಗ್ರಾಮ ಲೆಕ್ಕಾಧಿಕಾರಿಗಳು, ಸಹಾಯಕ ತೋಟಗಾರಿಕೆ ಅಧಿಕಾರಿಗಳು, ರೇμÉ್ಮ ಇಲಾಖೆ ಅಧಿಕಾರಿಗಳನ್ನು ಸಂಪರ್ಕಿಸಬಹುದೆಂದು ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement