ರಾಜ್ಯದಲ್ಲಿ ರೈತರಿಗೆ ನಿಗದಿತ ಸಮಯದಲ್ಲಿ ಸರಕಾರದ ಸೌಲಭ್ಯಗಳನ್ನು ಒದಗಿಸಲು ಪಹಣಿ ಅಥವಾ RTCಗೆ ಆಧಾರ್ ಸೀಡಿಂಗ್ ಮಾಡುವುನ್ನು ಕಡ್ಡಾಯಗೊಳಿಸಲಾಗಿದೆ.
ಅದರಂತೆ ರೈತರು ತಮ್ಮ ಜಮೀನಿನ ಪಹಣಿ ಹಾಗೂ ಆಧಾರ್ ದಾಖಲಾತಿಗಳೊಂದಿಗೆ ಸ್ವಯಂ ಪ್ರೇರಣೆಯಿಂದ ಇಲಾಖೆಯ https://landrecords.karnataka.gov.in/ service4 ನಲ್ಲಿ ಲಾಗಿನ್ ಮಾಡಿಕೊಂಡು ಆಧಾರ್‌ನೊಂದಿಗೆ
ಲಿಂಕ್ ಮಾಡಿಸಲು ಅವಕಾಶವನ್ನು ಕಲ್ಪಿಸಲಾಗಿದೆ.
ಪಹಣಿ ಹಾಗೂ ಆಧಾರ್ ದಾಖಲೆಯೊಂದಿಗೆ ಸಂಬಂಧಪಟ್ಟ ಗ್ರಾಮ ಆಡಳಿತಾಧಿಕಾರಿಯನ್ನು ಸಂಪರ್ಕಿಸುವ ಮೂಲಕವೂ ಲಿಂಕ್ ಮಾಡಬಹುದು.