ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನ

ಮೀನುಗಾರಿಕೆ ಇಲಾಖೆ: ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

 

ಚಿತ್ರದುರ್ಗ: ಚಿತ್ರದುರ್ಗ ತೋಟಗಾರಿಕೆ ಇಲಾಖೆ ವ್ಯಾಪ್ತಿಯ ಹಿರೆಗುಂಟನೂರು ಹೊಬಳಿಯ ಐಯ್ಯನಹಳ್ಳಿ ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ ರೈತರ ಮಕ್ಕಳಿಗೆ 10 ತಿಂಗಳ ವಸತಿ ಸಹಿತ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ಮೇ.23 ರಿಂದ  ಅರ್ಜಿ ಸಲ್ಲಿಕೆ ಪ್ರಕ್ರಿಯೆ ಪ್ರಾರಂಭವಾಗಿದ್ದು, ಜೂನ್ 03 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.

ಚಿತ್ರದುರ್ಗ ತಾಲ್ಲೂಕು ಹಿರೇಗುಂಟನೂರು ಹೋಬಳಿ ವ್ಯಾಪ್ತಿಯ ಐಯ್ಯನಹಳ್ಳಿ ಗ್ರಾಮದಲ್ಲಿನ ಐಯ್ಯನಹಳ್ಳಿ ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ 2024-25ನೇ ಸಾಲಿನಲ್ಲಿ 2024ರ ಜೂನ್ 15 ರಿಂದ 2025ರ ಮಾ.31 ರವರೆಗೆ ಅವಧಿ ಪರಿಷ್ಕರಿಸಲಾಗಿದ್ದು, ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.

Advertisement

ತರಬೇತಿ ಅರ್ಜಿಗಳನ್ನು ತೋಟಗಾರಿಕೆ ಉಪನಿರ್ದೇಶಕರು, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ಚಿತ್ರದುರ್ಗ ಕಚೇರಿಯಲ್ಲಿ ಅಥವಾ ಇಲಾಖೆಯ ವೆಬ್‍ಸೈಟ್ https://horticulturedir.karnataka.gov.in ನಲ್ಲಿ ಅಥವಾ ಕಚೇರಿ ವೇಳೆಯಲ್ಲಿ ಪಡೆಯಬಹುದಾಗಿದೆ.

ಆಯ್ಕೆಯಾದ ಶಿಬಿರಾರ್ಥಿಗಳಿಗೆ ಜಿಲ್ಲೆಯ ಐಯ್ಯನಹಳ್ಳಿ ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ ವಸತಿ ಸಹಿತ ತರಬೇತಿ ನೀಡಲಾಗುವುದು. ಮಾಜಿ ಸೈನಿಕ ಅಭ್ಯರ್ಥಿಗಳು ಆಯ್ಕೆಗೊಂಡಲ್ಲಿ ಈ ಅಭ್ಯರ್ಥಿಗಳಿಗೆ ಉಚಿತವಾಗಿ ಕಲಿಕೆಯ ಎಲ್ಲಾ ತರಹದ ಅವಕಾಶಗಳನ್ನು ಕಲ್ಪಿಸಲಾಗುವುದು. ಆದರೆ ವಸತಿ ನಿಲಯದಲ್ಲಿ ವಾಸ್ತವ್ಯದ ವ್ಯವಸ್ಥೆ ಕಡ್ಡಾಯ ಇರುವುದಿಲ್ಲ ಹಾಗೂ ಶಿಷ್ಯವೇತನಕ್ಕೆ ಅವಕಾಶವಿರುವುದಿಲ್ಲ. ತರಬೇತಿಗೆ ಒಟ್ಟು 15 ಅಭ್ಯರ್ಥಿಗಳಿಗೆ ಅವಕಾಶವಿದ್ದು, ಮೆರಿಟ್ ಆಧಾರದ ಮೇಲೆ ಸರ್ಕಾರದ ಮೀಸಲಾತಿ ನಿಯಮಗಳನುಸಾರ ಆಯ್ಕೆ ಮಾಡಲಾಗುತ್ತದೆ.

ಅಭ್ಯರ್ಥಿಗಳು ಕನಿಷ್ಠ ಎಸ್.ಎಸ್.ಎಲ್.ಸಿ. ಉತ್ತೀರ್ಣವಾಗಿರಬೇಕು. ತರಬೇತಿ ಬಯಸುವ ಅಭ್ಯರ್ಥಿಯ ಪೆÇೀಷಕರು ಕಡ್ಡಾಯವಾಗಿ ಜಮೀನು ಹೊಂದಿರಬೇಕು ಹಾಗೂ ಸ್ವಂತ ಜಮೀನನ್ನು ಸಾಗುವಳಿ ಮಾಡುತ್ತಿರಬೇಕು. ಮಾಜಿ ಸೈನಿಕರ ತರಬೇತಿಯನ್ನು  ಪಡೆಯಲು ಇಚ್ಚಿಸಿದ್ದಲ್ಲಿ ಡಿಸ್‍ಜಾರ್ಜ್ ಬುಕ್, ಪರ್ಸನಲ್ ಪೆನ್ಶೆನ್ ಆರ್ಡರ್ ಕಾಪಿ, ಎಕ್ಸ್ ಸರ್ವಿಸ್ ಮ್ಯಾನ್ ಐಡಿ ಕಾರ್ಡ್ ಕಾಪಿ, ಇತ್ಯಾದಿಗಳನ್ನ ಸಲ್ಲಿಸಬೇಕು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ 18 ವರ್ಷ ದಿಂದ 33 ವರ್ಷ, ಮಾಜಿ ಸೈನಿಕರಿಗೆ 33 ವರ್ಷ ದಿಂದ 65 ವರ್ಷ ವಯಸ್ಸಿನವರಾಗಿರಬೇಕು.

ಸಾಮ್ಯಾನ ಅಭ್ಯರ್ಥಿಗಳು ಅರ್ಜಿ ಶುಲ್ಕ ರೂ.30, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ, ಮಾಜಿ ಸೈನಿಕ ಅಭ್ಯರ್ಥಿಗಳು ಅರ್ಜಿ ಶುಲ್ಕ  ರೂ.15 ಮೌಲ್ಯದ ಇಂಡಿಯನ್ ಪೆÇೀಸ್ಟಲ್ ಆರ್ಡರ್ ಅಥವಾ ಡಿಮ್ಯಾಂಡ್ ಡ್ರಾಫ್ಟ್ (DD)    ಮೂಲಕ Deputy Director of  Horticulture (ZP) Chitradurga  ಹೆಸರಿನಲ್ಲಿ ಪಡೆದು, ಅಗತ್ಯ ದಾಖಲೆಗಳೊಂದಿಗೆ ತೋಟಗಾರಿಕೆ ಉಪನಿರ್ದೇಶಕರು, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಚಿತ್ರದುರ್ಗ ಕಚೇರಿಗೆ ಜೂನ್.3 ಸಂಜೆ 5.30 ರೊಳಗೆ  ಅರ್ಜಿ ಸಲ್ಲಿಸಬೇಕು.

ಜೂನ್ 06 ರಂದು ಬೆಳಿಗ್ಗೆ 10.ಗಂಟೆಗೆ ಚಿತ್ರದುರ್ಗ ತೋಟಗಾರಿಗೆ ಉಪ ನಿರ್ದೇಶಕರರ ಕಚೇರಿಯಲ್ಲಿ ಸಂದರ್ಶವನ್ನು ನೆಡೆಸಲಾಗುವುದು.

ಹೆಚ್ಚಿನ ಮಾಹಿತಿಗಾಗಿ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ಚಿತ್ರದುರ್ಗ ಕಚೇರಿಯನ್ನು ಅಥವಾ ದೂರವಾಣಿ ಸಂಖ್ಯೆ 08194-230895, 9980991048 ಅನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ತೋಟಗಾರಿಕೆ ಉಪನಿರ್ದೇಶಕರು ತಿಳಿಸಿದ್ದಾರೆ.

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement